Advertisement

ಬೆಳ್ತಂಗಡಿ: ಹಾಡುಹಗಲೇ ಮನೆಯಲ್ಲಿದ್ದ ವೃದ್ಧೆಯನ್ನು ಕೊಲೆಗೈದು,ಚಿನ್ನಾಭರಣ ಸಹಿತ ನಗದು ದರೋಡೆ

06:36 PM Jul 23, 2022 | Team Udayavani |

ಬೆಳ್ತಂಗಡಿ: ಹಾಡುಹಗಲೇ ಮನೆಯಲ್ಲಿದ್ದ ವೃದ್ಧರೋರ್ವರ ಮೇಲೆ ಹಲ್ಲೆ ನಡೆಸಿ ಅವರ ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದನ್ನು ದರೋಡೆಗೈದ ಘಟನೆ ಶನಿವಾರ ಮಧ್ಯಾಹ್ನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ನಡೆದಿದ್ದು, ಹಲ್ಲೆಗೊಳಗಾದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

Advertisement

ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು (85) ಹಲ್ಲೆ ನಡೆಸಿದ ಪರಿಣಾಮ ಸ್ಥಳದಲ್ಲೇ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ:  ಹುಬ್ಬಳ್ಳಿ: ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ; 10ಕ್ಕೂ ಹೆಚ್ಚು ಮಂದಿ ಗಂಭೀರ

ಅಕ್ಕು ಅವರು ತಮ್ಮ ಮಗ, ಸೊಸೆ ಮತ್ತು ಮೊಮ್ಮಗಳ ಜೊತೆ ವಾಸವಿದ್ದು, ಮಗ ಮತ್ತು ಸೊಸೆ ಕೆಲಸಕ್ಕೆ ಹೋಗಿದ್ದರು. ಮೊಮ್ಮಗಳು ಮಧ್ಯಾಹ್ನ ಶಾಲೆ ಬಿಟ್ಟು ಮನೆಗೆ ಬಂದು ಅಜ್ಜಿಯನ್ನು ಕೆರೆದಾಗ, ಅಜ್ಜಿ ಮನೆಯಲ್ಲಿ ಇರಲಿಲ್ಲ. ನಂತರ ಹೊರಗಡೆ ಬಂದು ನೋಡಿದಾಗ  ಅಜ್ಜಿ ಅಕ್ಕು ಅವರು ತಮ್ಮ ಮನೆಯ ಸಮೀಪದ ಹಟ್ಟಿಯ ಹಿಂದೆ ಬಿದ್ದಿರುವುದು  ಕಂಡು ಬಂದು ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಅವರು ಬಂದು ನೋಡಿದಾಗ ಅಕ್ಕು ಅವರು ಮೃತಪಟ್ಟಿದ್ದು, ಅವರ ಕಿವಿಯಲ್ಲಿದ್ದ ಚಿನ್ನಾಭರಣ ಕಿತ್ತುಕೊಂಡು ಮನೆಯಲ್ಲಿದ್ದ ನಗದನ್ನು ಯಾರೋ ದರೋಡೆಗೈದಿರುವುದು  ಬೆಳಕಿಗೆ ಬಂದಿದೆ.

ಯಾರೋ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿ ಕೊಲೆಗೈದು ಅವರು ಚಿನ್ನಾಭರಣ ದರೋಡೆಗೈದಿರಬೇಕೆಂದು ಸಂಶಯಿಸಲಾಗಿದೆ. ಈ ಬಗ್ಗ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next