Advertisement

ತೇಜ್ ಪಾಲ್ ಅತ್ಯಾಚಾರ ಪ್ರಕರಣ : ಆಗಸ್ಟ್ 9ಕ್ಕೆ ವಿಚಾರಣೆ ಮುಂದೂಡಿದ ಬಾಂಬೆ ಹೈ ಕೋರ್ಟ್

04:48 PM Jul 30, 2021 | Team Udayavani |

ಪಣಜಿ : ಸಹೋದ್ಯೋಗಿ ಪತ್ರಕರ್ತೆಯ ಮೇಲೆ ಲೈಂಗಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ತೆಹಲ್ಕಾ ಪತ್ರಿಕೆಯ ಮಾಜಿ ಸಂಪಾದಕ ತರುಣ್ ತೇಜ್‍ ಪಾಲ್ ಪ್ರಕರಣದ ವಿಚಾರಣೆಯನ್ನು ಬಾಂಬೆ ಹೈ ಕೋರ್ಟ್ ಆಗಷ್ಟ 9 ಕ್ಕೆ ಮುಂದೂಡಿದೆ.

Advertisement

ಅತ್ಯಾಚಾರ ಪ್ರಕರಣದಲ್ಲಿ ಮಾಪ್ಸಾ ಸೆಶನ್ ಕೋರ್ಟ್ ತರುಣ್ ತೇಜ್‍ಪಾಲ್‍ರನ್ನು ಸಾಕ್ಷಾಧಾರಗಳ ಕೊರತೆಯಿಂದ ನಿರಪರಾಧಿ ಎಂದು ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಗೋವಾ ಸರ್ಕಾರವು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಭೆ ಹೈ ಕೋರ್ಟ್ ಮೆಟ್ಟಿಲೇರಿತ್ತು.

ಇದನ್ನೂ ಓದಿ : ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೆಯ ಪೀಠಾಧಿಪತಿ ಪೀಠಾರೋಹಣ

ಆದರೆ ಮುಂಬಯಿ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆಯ ಸಂದರ್ಭದಲ್ಲಿ ಕಾರಣಾಂತರಗಳಿಂದ ತೇಜ್‍ಪಾಲ್ ಪರ ವಕೀಲರು ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರ ಪರವಾಗಿ ಹಿರೀಯ ವಕೀಲ ಅಮಿತ್ ದೇಸಾಯಿ ಉಪಸ್ಥಿತರಿದ್ದರು.

ಈ ಪ್ರಕರಣದಲ್ಲಿ ಸವಿಸ್ತಾರ ಮಾಹಿತಿಯಿಲ್ಲದ ಕಾರಣ ಸಮಯ ಕೋರಿ ತೇಜ್‍ ಪಾಲ್ ಪರ ವಕೀಲರು ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು.

Advertisement

ಇದನ್ನೂ ಓದಿ : ಬ್ಯಾಂಕ್ ಮ್ಯಾನೇಜರ್ ಗೆ ಚೂರಿಯಿಂದ ಇರಿದು ಹತ್ಯೆಗೈದ ಮಾಜಿ ಬ್ಯಾಂಕ್ ಮ್ಯಾನೇಜರ್!

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next