Advertisement

ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ : ಕಾರಣ ನಿಗೂಢ

01:31 PM Aug 01, 2022 | Team Udayavani |

ತೆಕ್ಕಟ್ಟೆ : ಮೈ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ತಾಲೂಕಿನ ಕುಂಭಾಶಿ ಗ್ರಾಮ‌ಪಂಚಾಯತ್ ವ್ಯಾಪ್ತಿಯ ಕೊರವಡಿ ಶ್ರೀ ಮಲಸಾವರಿ ದೇವಸ್ಥಾನ ದ ಸಮೀಪದ ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದೆ.

Advertisement

ಮಣೂರು ಪಡುಕೆರೆ ಸರಕಾರಿ ಪ್ರೌಢಶಾಲೆಯ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಅನನ್ಯ (13) ‌ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಸೋಮವಾರ ಮುಂಜಾನೆ ಮನೆಯ ಒಳಗೆ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ತಕ್ಷಣವೇ ತೆಕ್ಕಟ್ಟೆ ಫ್ರೆಂಡ್ಸ್ ನ ಆ್ಯಂಬುಲೆನ್ಸ್ ಸಹಾಯದಿಂದ ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಕೂಡಾ ಅಷ್ಟರಲ್ಲಿಯೇ ಅಸುನೀಗಿದ್ದಾರೆ.

ವಿದ್ಯಾರ್ಥಿನಿಯ ದೇಹ ಭಾಗಶಃ ಸುಟ್ಟು ಹೋಗಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.‌ ಘಟನಾ ಸ್ಥಳಕ್ಕೆ ಕುಂದಾಪುರ ಪೊಲೀಸ್ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ : ನಮ್ಮದು ಭೇದಭಾವ ಮಾಡುವ ಪಕ್ಷವಲ್ಲ: ಎಚ್ ಡಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next