Advertisement

ತೆಕ್ಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ ನಿಂತ ಲಾರಿ

10:53 AM May 30, 2020 | sudhir |

ತೆಕ್ಕಟ್ಟೆ ; ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಎದುರಿನಿಂದ ಸಾಗುತಿದ್ದ ಲಾರಿಗೆ ಡಿಕ್ಕಿ ಹೊಡೆದು ಡಿವೈಡರ್ ಏರಿ ನಿಂತ ಘಟನೆ ರಾ.ಹೆ.66ರ ತೆಕ್ಕಟ್ಟೆ ಎಚ್ ಪಿ ಪೆಟ್ರೋಲ್ ಬಂಕ್ ಎದುರು ಶನಿವಾರ ಮುಂಜಾನೆ ಸಂಭವಿಸಿದೆ.

Advertisement

ಬಿಜಾಪುರದಿಂದ ಕಲ್ಲಂಗಡಿ ಹಣ್ಣುಗಳನ್ನು ತುಂಬಿಕೊಂಡು ಉಡುಪಿ ಕಡೆಗೆ ಸಾಗುತಿದ್ದ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ ಪರಿಣಾಮ ಎದುರಿನಿಂದ ಸಾಗುತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿಹೊಡೆದು ಡಿವೈಡರ್ ಹತ್ತಿ ನಿಂತಿದೆ.

ಅಪಘಾತದ ತೀವ್ರತೆಗೆ ಲಾರಿಯ ಮುಂಭಾಗ ಜಖಂಗೊಂಡಿದ್ದು ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಲಾರಿಯಲ್ಲಿದ್ದ ಕಲ್ಲಂಗಡಿ ಹಣ್ಣನ್ನು ಪರ್ಯಾಯವಾಗಿ ಮತ್ತೊಂದು ಲಾರಿಗೆ ವರ್ಗಾಯಿಸಲಾಯಿತು.

ಚಿತ್ರ: ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ

Advertisement
Advertisement

Udayavani is now on Telegram. Click here to join our channel and stay updated with the latest news.

Next