Advertisement

ಉಪ್ಪುನೀರು ಶುದ್ಧೀಕರಣ ಕೇಂದ್ರಕ್ಕೆ ತಾತ್ವಿಕ ಒಪ್ಪಿಗೆ

06:10 AM Mar 20, 2018 | |

ಬೆಂಗಳೂರು: ಮಂಗಳೂರಿನಲ್ಲಿ ಸಮುದ್ರದ ಉಪ್ಪುನೀರು ಶುದ್ಧೀಕರಿಸುವ ಘಟಕ ಆರಂಭಿಸುವ ಯೋಜನೆಗೆ ಸಚಿವ ಸಂಪುಟ ಸಭೆ ತಾತ್ವಿಕ ಅನುಮೋದನೆ ನೀಡಿದೆ.

Advertisement

ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಂತೆ ಚರ್ಚಿಸಿ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ಸುಮಾರು 806 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾರ್ಯಸಾಧ್ಯತಾ ವರದಿಗೆ ಸಂಪುಟ ಒಪ್ಪಿಗೆ ನೀಡಿದೆ. ಇನ್ನು ಮುಂದೆ ಸಮಗ್ರ ಯೋಜನಾ ವರದಿ ತಯಾರಿಸಬೇಕಾಗಿದ್ದು, ವರದಿ ತಯಾರಾದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಮುದ್ರದ ಉಪ್ಪುನೀರನ್ನು ಶುದ್ಧೀಕರಿಸಿ ಅದನ್ನು ಪೈಪ್‌ಲೈನ್‌ ಮೂಲಕ ಬೆಂಗಳೂರಿಗೆ ತರುವ ಬಗ್ಗೆ ಈ ಹಿಂದೆ ಚರ್ಚಿಸಲಾಗಿತ್ತು. ಅದರಂತೆ ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಇದೀಗ ಈ ಯೋಜನೆ ಜಾರಿಗೆ ಸಂಪುಟ ಒಪ್ಪಿಗೆ ನೀಡಿದ್ದು, ಮುಂದಿನ ದಿನಗಳಲ್ಲಿ ಅದರ ರೂಪುರೇಷೆಗಳು ಸಿದ್ಧವಾಗಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next