Advertisement

ಆರು ಕ್ಷೇತ್ರಗಳಲ್ಲಿ 75 ಅಭ್ಯರ್ಥಿಗಳು

06:10 AM May 27, 2018 | Team Udayavani |

ಬೆಂಗಳೂರು: ರಾಜ್ಯ ವಿಧಾನಪರಿಷತ್ತಿಗೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ 6 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಅಂತಿಮವಾಗಿ 75 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಒಟ್ಟು 141 ನಾಪತ್ರಗಳು ಸಲ್ಲಿಕೆಯಾಗಿದ್ದವು. ನಾಮಪತ್ರ ವಾಪಸ್‌ ಪಡೆದುಕೊಳ್ಳಲು ಮೇ 25 ಕೊನೆ ದಿನವಾಗಿತ್ತು. ಅದರಂತೆ, ನಾಮಪತ್ರ ತಿರಸ್ಕಾರ ಮತ್ತು ನಾಮಪತ್ರಗಳನ್ನು ವಾಪಸ್‌ ಪಡೆದುಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಂತಿಮವಾಗಿ 75 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.

Advertisement

ಅಂತಿಮವಾಗಿ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 10, ನೈರುತ್ಯ ಪದವೀಧರ ಕ್ಷೇತ್ರದಲ್ಲಿ 8, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 12, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 9, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 14 ಹಾಗೂ ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 22 ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡಿದ್ದಾರೆ.

ಆರು ಕ್ಷೇತ್ರಗಳ ಪೈಕಿ ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಅತಿ ಹೆಚ್ಚು 22 ಅಭ್ಯರ್ಥಿಗಳು ಕಣದಲ್ಲಿದ್ದು, ಇದರಲ್ಲಿ
ಬಿಜೆಪಿ, ಕಾಂಗ್ರೆಸ್‌ ಜೆಡಿಎಸ್‌, ಸಿಪಿಎಂ,ಬಿಜೆಡಿ ಅಭ್ಯರ್ಥಿಗಳಲ್ಲದೇ 17 ಜನ ಪಕ್ಷೇತರರು ಕಣದಲ್ಲಿದ್ದಾರೆ. ಈ ಆರು ಕ್ಷೇತ್ರಗಳಲ್ಲಿ ಜೂ. 8ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಜೂ.12ಕ್ಕೆ ಫ‌ಲಿತಾಂಶ ಹೊರಬೀಳಲಿದೆ.

ವಿಧಾನಪರಿಷತ್‌ ಚುನಾವಣೆ: ಕಣದಲ್ಲಿ 36 ಅಭ್ಯರ್ಥಿಗಳು 
ಬೆಂಗಳೂರು: ವಿಧಾನಪರಿಷತ್ತಿನ ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಜೂ.8ರಂದು ಚುನಾವಣೆ ನಡೆಯಲಿದ್ದು, ಕಣದಲ್ಲಿ ಒಟ್ಟು 36 ಅಭ್ಯರ್ಥಿಗಳಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ಬೆಂಗಳೂರು ಪ್ರಾದೇಶಿಕ ಆಯುಕ್ತ ಶಿವಯೋಗಿ ಸಿ. ಕಳಸದ ತಿಳಿಸಿದ್ದಾರೆ.

ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಪದ ವೀಧರ ಕ್ಷೇತ್ರದಲ್ಲಿ 22, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 14 ಅಭ್ಯರ್ಥಿಗಳು ಇದ್ದಾರೆ. ಜೂ.8ಕ್ಕೆ ಮತದಾನ ನಡೆದು, ಜೂ.12ರಂದು ಫ‌ಲಿತಾಂಶ ಹೊರಬೀಳಲಿದೆ ಎಂದರು.

Advertisement

ಬೆಂಗಳೂರು ಪದವೀಧರ ಕ್ಷೇತ್ರದ ವ್ಯಾಪ್ತಿಗೆ ಬೆಂಗಳೂರು ನಗರ ಜಿಲ್ಲೆ,ಗ್ರಾಮಾಂತರ, ರಾಮನಗರ ಜಿಲ್ಲೆ, ಬಿಬಿಎಂಪಿ (ಕೇಂದ್ರ, ಉತ್ತರ ಮತ್ತು ದಕ್ಷಿಣವಲಯ) ಬರುತ್ತವೆ. ಈ ಕ್ಷೇತ್ರದಲ್ಲಿ ಒಟ್ಟು 65,354 ಮತದಾರರಿದ್ದಾರೆ. ಈ ಪೈಕಿ 38,451 ಪುರುಷರು, 26,891 ಮಹಿಳೆ ಯರು ಮತ್ತು 12 ಮಂದಿ ಇತರರಿದ್ದಾರೆ.

ಕ್ಷೇತ್ರದ ವ್ಯಾಪ್ತಿಯಲ್ಲಿ 36 ಮುಖ್ಯ ಮತಗಟ್ಟೆ ಗಳು, 46 ಹೆಚ್ಚುವರಿ ಮತಗಟ್ಟೆಗಳು ಸೇರಿ ದಂತೆ ಒಟ್ಟು 82
ಮತಗಟ್ಟೆಗಳಿವೆ ಎಂದರು ಅದೇ ರೀತಿ ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ದಾವಣಗೆರೆ (ದಾವಣಗೆರೆ, ಹರಿಹರ, ಜಗಳೂರು), ಚಿತ್ರದುರ್ಗ,ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳು ಸೇರಲಿವೆ. ಕ್ಷೇತ್ರದಲ್ಲಿ
ಒಟ್ಟು 19,402 ಮತದಾರರಿದ್ದು, ಆ ಪೈಕಿ 13,461 ಪುರುಷರು, 5,940 ಮಹಿಳೆ ಯರು ಮತ್ತು ಇತರೆ ಒಬ್ಬರಿದ್ದಾರೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 31 ಮುಖ್ಯ ಮತಗಟ್ಟೆ,6 ಹೆಚ್ಚುವರಿ ಮತಗಟ್ಟೆ ಸೇರಿದಂತೆ ಒಟ್ಟು 37 ಮತಗಟ್ಟೆ ಕೇಂದ್ರಗಳಿವೆ ಎಂದು ಪ್ರಾದೇಶಿಕ ಆಯುಕ್ತರು ತಿಳಿಸಿದರು.

ಪ್ರತಿ ಮತಗಟ್ಟೆಗೆ ಒಬ್ಬರು ಚುನಾವಣಾಧಿಕಾರಿ, ಇಬ್ಬರು ಸಹಾಯಕ ಸಹಾಯಕ ಚುನಾವಣಾಧಿಕಾರಿಗಳು, ಇಬ್ಬರು
ಪೊಲೀಸ್‌ ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನೇಮಿಸಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಗೆ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ 16 ಫ್ಲೈಯಿಂಗ್‌ ಸೌÌ$Rಡ್‌ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 31 ಫ್ಲೈಯಿಂಗ್‌ ಸೌÌ$Rಡ್‌ ರಚಿಸಲಾಗಿದೆ. ಪ್ರತಿ ಮತಗಟ್ಟೆಗೆ ಒಬ್ಬ ಮೈಕ್ರೋ ಅಬ್ಸರ್ವರ್‌ ನೇಮಿಸಲಾಗಿದೆ. ಮತದಾನದ ದಿನ ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆ ಚಿತ್ರೀಕರಿಸಲು ಒಬ್ಬರು ವಿಡಿಯೋಗ್ರಾಫ‌ರ್‌ ನೇಮಿಸಲಾಗಿದೆ.

ಎರಡೂ ಕ್ಷೇತ್ರಗಳಲ್ಲಿ ಜೂ.6ರಂದು ಸಂಜೆ 4 ಗಂಟೆಗೆ ಅಭ್ಯರ್ಥಿಗಳು ಬಹಿರಂಗ ಪ್ರಚಾರ ಅಂತ್ಯಗೊಳಿಸಲು ಸೂಚಿಸಲಾಗಿದೆ. ಜೂ.8 ರಂದು ಎರಡೂ ಕ್ಷೇತ್ರಗಳಲ್ಲಿ ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನಕ್ಕೆ ಅವಕಾಶ
ನೀಡಲಾಗಿದೆ ಎಂದು ತಿಳಿಸಿದರು.

ಜೂ.12ರಂದು ಮತ ಎಣಿಕೆ 
ಜೂ.12ರಂದು ನಗರದ ರೇಸ್‌ ಕೋರ್ಸ್‌ ರಸ್ತೆಯ ರಾಮನಾರಾಯಣ್‌ ಚಲ್ಲಾ ರಾಮ್‌ ಕಾಲೇಜಿನಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ನಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ತಲಾ 14 ಟೇಬಲ್‌ಗ‌ಳಲ್ಲಿ ಎರಡೂ ಕ್ಷೇತ್ರದ ಮತ ಎಣಿಕೆ ನಡೆಯಲಿದೆ. ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣಾ ವೀಕ್ಷಕರಾಗಿ ಹಿರಿಯ ಐಎಎಸ್‌ ಅಧಿಕಾರಿ ದರ್ಪಣ್‌ ಜೈನ್‌ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ವೀಕ್ಷಕರಾಗಿ ಮಂಜುನಾಥ ಪ್ರಸಾದ್‌ರನ್ನು ನೇಮಿಸಲಾಗಿದೆ ಎಂದರು.

ಎಡಗೈ ಮಧ್ಯದ ಬೆರಳಿಗೆ ಶಾಯಿ 
ಮತ ಚಲಾಯಿಸುವಾಗ ಎಪಿಕ್‌ ಐಡಿ ಅಥವಾ ಚುನಾವಣಾ ಆಯೋಗದಿಂದ ಸೂಚಿಸಿರುವ ಯಾವುದಾದರೂ ಗುರುತಿನ ಚೀಟಿ ಹಾಜರುಪಡಿಸಬೇಕು.ಇತ್ತೀಗಷ್ಟೇ ನಡೆದ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ಎಡಗೈ ತೋರು ಬೆರಳಿಗೆ ಶಾಹಿ ಹಾಕಿರುವುದರಿಂದ ಈ ಚುನಾವಣೆಯಲ್ಲಿ ಮತದಾರರ ಎಡಗೈ ಮಧ್ಯದ ಬೆರಳಿಗೆ ಶಾಯಿ ಹಾಕಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next