Advertisement

ನಗರದಲ್ಲಿ 88.81 ಲಕ್ಷ ಮತದಾರರು

11:24 AM Jan 17, 2019 | |

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ 88.81 ಲಕ್ಷ ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದರು.

Advertisement

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019ರ ಅಂತ್ಯದ ವೇಳೆಗೆ ನಗರದ ಜನಸಂಖ್ಯೆ 1,37,30,303 ತಲುಪಲಿದೆ ಎಂದು ಅಂದಾಜಿಸಲಾಗಿದೆ. ನಗರದ ಒಟ್ಟು ಜನಸಂಖ್ಯೆಯಲ್ಲಿ ಶೇ.64.67ರಷ್ಟು ಮತದಾರರಿದ್ದು, ವಿಶೇಷ ಮತದಾರರ ನೋಂದಣಿ ಅಭಿಯಾನದ ವೇಳೆ 67,020 ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.

ಹಿಂದೆ ಪ್ರಕಟಿಸಲಾದ ಮತದಾರರ ಪಟ್ಟಿಯಲ್ಲಿ 89,57,064 ಮತದಾರರಿದ್ದರು. ಆನಂತರದಲ್ಲಿ ಮೃತಪಟ್ಟವರು, ವಿಳಾಸ ಬದಲಿಸಿದವರು, ನಕಲಿ ಮತದಾರರನ್ನು ಪತ್ತೆ ಹಚ್ಚಿ 1,75,183 ಹೆಸರುಗಳನ್ನು ಪಟ್ಟಿಯಿಂದ ತೆಗೆದಿದ್ದು, ಸದ್ಯ 88,81,066 ಮತದಾರರಿದ್ದಾರೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ ಎಂದು ಹೇಳಿದರು.

ಜನಸಂಖ್ಯೆಗೆ ಅನುಗುಣವಾಗಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 8,514 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಅಲ್ಲಿ ಬಳಸಲಾಗುವ ಮತಯಂತ್ರಗಳ ಪರಿಶೀಲನಾ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಜತೆಗೆ ಪ್ರತಿ ಮತಗಟ್ಟೆಯಲ್ಲಿಯೂ ವಿವಿಪ್ಯಾಟ್ ಬಳಸಲಾಗುವುದು. ಅದರಂತೆ ಪ್ರತಿ ಮತಗಟ್ಟೆಗೂ ಪ್ರತ್ಯೇಕ ಮತಗಟ್ಟೆ ಅಧಿಕಾರಿಯನ್ನು ನೇಮಿಸಿದ್ದು, ಅವರು ಮತದಾರರ ಹೆಸರು ಸೇರ್ಪಡೆ, ತೆಗೆದು ಹಾಕುವುದು ಸೇರಿ ಇನ್ನಿತರ ಕಾರ್ಯಗಳಲ್ಲಿ ತೊಡಗಿದ್ದಾರೆ. ಲೋಕಸಭೆ ಚುನಾವಣೆ ಕಾರ್ಯಕ್ಕಾಗಿ 65 ಸಾವಿರ ಸಿಬ್ಬಂದಿ, ಅಧಿಕಾರಿಗಳ ಅವಶ್ಯಕತೆಯಿದೆ. ಅವರ ನಿಯೋಜನೆ ಕುರಿತು ಚುನಾವಣಾ ಆಯೋಗಕ್ಕೆ ಈಗಾಗಲೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಕರಡು ಮತದಾರರ ಪಟ್ಟಿ ಪ್ರಕಟವಾದ ನಂತರ ನಡೆಸಲಾದ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ರಾಜರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರ ಒಂದರಲ್ಲೇ 14,880 ಮತದಾರರನ್ನು ಪಟ್ಟಿಯಿಂದ ತೆಗೆಯಲಾಗಿದೆ. ಯಶವಂತಪುರದಲ್ಲಿ 12,798, ಮಹದೇವಪುರದಲ್ಲಿ 12,537, ಬೊಮ್ಮನಹಳ್ಳಿ, ಯಲಹಂಕ, ದಾಸರಹಳ್ಳಿ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ 10 ಸಾವಿರಕ್ಕೂ ಹೆಚ್ಚು ಹೆಸರುಗಳನ್ನು ವಿವಿಧ ಕಾರಣಗಳಿಗಾಗಿ ಪಟ್ಟಿಯಿಂದ ತೆಗೆಯಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದರು.

Advertisement

3 ಕ್ಷೇತ್ರಗಳ ಮತ ಯಂತ್ರಗಳು ಜಪ್ತಿ: ಗೋವಿಂದರಾಜನಗರ, ರಾಜರಾಜೇಶ್ವರಿನಗರ ಹಾಗೂ ಕೆ.ಆರ್‌.ಪುರ ವಿಧಾನಸಭೆ ಕ್ಷೇತ್ರಗಳ ಚುನಾವಣೆ ವೇಳೆ ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ಹಾಗಾಗಿ ಆ ಮೂರು ಕ್ಷೇತ್ರಗಳಿಗೆ ಸಂಬಂಧಿಸಿದ ಮತಯಂತ್ರಗಳನ್ನು ಜಪ್ತಿ ಮಾಡಿ ಒಂದೆಡೆ ಇರಿಸಲಾಗಿದೆ. ಉಳಿದ ವಿಕ್ಷೇತ್ರಗಳ ಮತಯಂತ್ರಗಳನ್ನು ಲೋಕಸಭಾ ಚುನಾವಣೆಗೆ ಬಳಸಲಾಗುವುದು ಎಂದು ಮಂಜುನಾಥ ಪ್ರಸಾದ್‌ ತಿಳಿಸಿದರು.

ನಗರದಲ್ಲಿರುವ ಒಟ್ಟು ಮತದಾರರು ಪಟ್ಟಿಯಿಂದ ತೆಗೆಯಲಾದ ಹೆಸರುಗಳು ಹೊಸದಾಗಿ ಸೇರ್ಪಡೆಯಾದ ಮತದಾರರು ಹೆಸರು ಸೇರಿಸಲು ಅವಕಾಶ ಮತದಾರರ ಅಂತಿಮ ಪಟ್ಟಿ ಪ್ರಕಟಗೊಂಡರೂ ಪಟ್ಟಿಯಲ್ಲಿ ಹೆಸರು ಸೇರಿಸಲು ಇನ್ನೂ ಅವಕಾಶವಿದೆ. ಅದರಂತೆ ಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಸಲು ನಿಗದಿ ಮಾಡಿದ ದಿನಾಂಕದ 10 ದಿನ ಹಿಂದಿನವರೆಗೆ ಪಟ್ಟಿಯಲ್ಲಿ ಹೆಸರು ಸೇರಿಸಬಹುದು. ಆ ಹಿನ್ನೆಲೆಯಲ್ಲಿ ವಿಶೇಷ ಆಂದೋಲನದ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರಿಸುವ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.

67,020 ನಗರದಲ್ಲಿರುವ ಒಟ್ಟು ಮತದಾರರು ಪಟ್ಟಿಯಿಂದ ತೆಗೆಯಲಾದ ಹೆಸರುಗಳು ಹೊಸದಾಗಿ ಸೇರ್ಪಡೆಯಾದ ಮತದಾರರು

ಹೆಸರು ಸೇರಿಸಲು ಅವಕಾಶ
ಮತದಾರರ ಅಂತಿಮ ಪಟ್ಟಿ ಪ್ರಕಟಗೊಂಡರೂ ಪಟ್ಟಿಯಲ್ಲಿ ಹೆಸರು ಸೇರಿಸಲು ಇನ್ನೂ ಅವಕಾಶವಿದೆ. ಅದರಂತೆ ಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಸಲು ನಿಗದಿ ಮಾಡಿದ ದಿನಾಂಕದ 10 ದಿನ ಹಿಂದಿನವರೆಗೆ ಪಟ್ಟಿಯಲ್ಲಿ ಹೆಸರು ಸೇರಿಸಬಹುದು. ಆ ಹಿನ್ನೆಲೆಯಲ್ಲಿ ವಿಶೇಷ ಆಂದೋಲನದ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರಿಸುವ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next