Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪಕ್ಷ ಸಂಘಟನೆಯಲ್ಲಿ ಸಕ್ರಿಯ ನಾಗಿದ್ದ ನನಗೆ ಟಿಕೆಟ್ ಸಿಗುವ ನಿರೀಕ್ಷೆ ಇತ್ತಾದರೂ ಕೊನೆ ಕ್ಷಣದಲ್ಲಿ ಅದು ಬೇರೆಯವರ ಪಾಲಾಯಿತು. ಬಿಜೆಪಿಯನ್ನು ಸೋಲಿಸಲೇಬೇಕೆಂದು ಕಾರ್ಯೋನ್ಮುಖನಾದ ನನಗೆ ಟಿಕೆಟ್ ಸಿಗದ ಕಾರಣ ಬಂಡಾಯವಾಗಿ ನಾಮಪತ್ರ ಸಲ್ಲಿಸಬೇಕಾಯಿತು ಎಂದು ಸ್ಪಷ್ಟಪಡಿಸಿದರು.
Related Articles
Advertisement
ಹೈಕಮಾಂಡ್ ಸಲಹೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಹೆಸರಿನಿಂದಲೂ ನಾಮ ಪತ್ರ ಸಲ್ಲಿಸಿದ್ದೆ, ಆದರೆ ಅದು ಬಿ ಫಾರಂ ಇಲ್ಲದ ಕಾರಣ ಈಗಾಗಲೇ ತಿರಸ್ಕೃತಗೊಂಡಿದೆ. ಕಳೆದ ಬಾರಿ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಮೂರನೇ ಸ್ಥಾನದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಒಂದನೇ ಸ್ಥಾನಕ್ಕೆ ತರುವುದೇ ನಮ್ಮ ಗುರಿಯಾಗಿದ್ದು, ಕ್ಷೇತ್ರದ ಅಭ್ಯರ್ಥಿಯನ್ನು ಪ್ರಬಲಗೊಳಿಸುತ್ತೇವೆ ಎಂದು ಮುತ್ತಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಕೊಡಗು ಬಿಜೆಪಿಯ ಭದ್ರಕೋಟೆ ಅಲ್ಲವೆಂದು ಅಭಿಪ್ರಾಯಪಟ್ಟ ನಾಪಂಡ ಮುತ್ತಪ್ಪ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ವಿಳಂಬ ಧೋರಣೆ ತೋರುತ್ತಿರುವುದೇ ಬಿಜೆಪಿ ಗೆಲುವಿಗೆ ಕಾರಣ ಎಂದು ವಿಶ್ಲೇಷಿಸಿದರು.
ಜಿಲ್ಲಾಧ್ಯಕ್ಷ ಸ್ಥಾನ ಸಿಗಲಿದೆ ನಾಮಪತ್ರ ಹಿಂಪಡೆಯುವಂತೆ ಮನವೊಲಿಸುವ ಸಂದರ್ಭ ಪಕ್ಷದ ಪ್ರಮುಖರು ನನಗೆ ಜಿಲ್ಲಾಧ್ಯಕ್ಷ ಸ್ಥಾನ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಇನ್ನು ಎರಡು ತಿಂಗಳಿನಲ್ಲಿ ಜಿಲ್ಲಾಧ್ಯಕ್ಷ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ಅಧಿಕಾರ ವಹಿಸಿಕೊಂಡ ನಂತರ ಢೋಂಗಿ ನಾಯಕರು ಪಕ್ಷದಲ್ಲಿರಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಉಸ್ತುವಾರಿ ಸಚಿವರು ಬರುವಾಗ, ಹೋಗುವಾಗ ಕಾರಿನಲ್ಲಿ ಕುಳಿತು ಢೋಂಗಿ ನಾಯಕತ್ವ ಮಾಡಿದವರು ಪಕ್ಷ ಸಂಘಟನೆಯಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಮುತ್ತಪ್ಪ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಐಎನ್ಟಿಯುಸಿ ಪ್ರಧಾನ ಕಾರ್ಯದರ್ಶಿ ನಾಪಂಡ ಮುದ್ದಪ್ಪ, ಜಿಲ್ಲಾಧ್ಯಕ್ಷ ಟಿ.ಪಿ. ಹಮೀದ್, ಪ್ರಮುಖರಾದ ಹೊಸಬೀಡು ಹೂವಯ್ಯ, ಅಜ್ಜಳ್ಳಿ ರವಿ ಹಾಗೂ ಕಿಶೋರ್ ಉಪಸ್ಥಿತರಿದ್ದರು.