Advertisement
ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ತಾವಂಶಿ ಗ್ರಾಮದಲ್ಲಿ ಶನಿವಾರ (ಅ.12) ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Related Articles
Advertisement
ನಾವೇನು ವಿಧಾನಸೌಧಕ್ಕೆ ಹೋಗಿ ಖಾಲಿ ಕುಂತಿಲ್ಲ, ಚೈನಿ (ಮೋಜು, ಮಸ್ತಿ) ಮಾಡುತ್ತಿಲ್ಲ. ರೈತರ ಕಷ್ಟ ಸುಖಗಳನ್ನು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡ್ತಿದ್ದೇನೆ. ಆದರೆ ಸರ್ಕಾರದವರು ನಮಗೆ ಸ್ಪಂದನೆ ಮಾಡುತ್ತಿಲ್ಲ ಎಂದು ಸಿದ್ದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಕಾಗೆ ಬೇಕಾದರೆ ನಾನು ನಾಳೆ ಹೋಗಿ ರಾಜೀನಾಮೆ ಕೊಡುತ್ತೇನೆ, ಏತಕ್ಕಾಗಿ ನಾವು ಎಂಎಲ್‌ಎ ಗಳಾಗಿರಬೇಕು, ಯಾತಕ್ಕಾಗಿ ನಾವು ಅಧಿಕಾರದಲ್ಲಿಬೇಕು. ಆಡಳಿತ ಪಕ್ಷದ ಒಬ್ಬ ಶಾಸಕನಾಗಿ ಅಸಹಾಯಕತೆ ಬಗ್ಗೆ ಹೇಳುತ್ತಿದ್ದೀನಿ. ಎಷ್ಟರಮಟ್ಟಿಗೆ ಈ ವ್ಯವಸ್ಥೆಯಲ್ಲಿ ಬದುಕಿದ್ದೇವೆ ಎಂದು ಅರ್ಥ ಮಾಡಿಕೊಳ್ಳಿ. ಕಾಂಗ್ರೆಸ್ ಸರ್ಕಾರದ ನಡೆಯಿಂದಾಗಿ ನನ್ನ ಮನಸ್ಸಿಗೆ ಬಹಳ ನೋವಾಗಿದೆ ಎಂದರು.
ಹೀಗಾಗಿ ಮುಂದಿನ ಸಲ ನನಗೆ ಎಂಎಲ್ಎ ಆಗುವುದು ಬೇಕಾಗಿಲ್ಲ ಎಂದು ಕ್ಷೇತ್ರದ ಜನತೆ ಮುಂದೆ ಶಾಸಕ ರಾಜು ಕಾಗೆ ತಮ್ಮ ಅಸಹಾಯಕತೆ ತೊಡಿಕೊಂಡಿದ್ದಾರೆ.