Advertisement

ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ: ಎಚ್ ಡಿಕೆ ಕಿಡಿ

09:49 AM Sep 24, 2022 | Team Udayavani |

ಬೆಂಗಳೂರು: ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ ಎಂದು ಎಚ್ ಡಿಕೆ ಹೇಳಿದ್ದಾರೆ.

Advertisement

ನವರಾತ್ರಿಗೆಕರೆಂಟ್ಶಾಕ್ ಎಂಬ ಹ್ಯಾಷ್ ಟ್ಯಾಗ್ ನಲ್ಲಿ ಟ್ವೀಟ್ ಮಾಡಿರುವ ಅವರು, ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದಿದ್ದಾರೆ.

ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್‌ ದರ ಏರಿಕೆ ಆಗಿದೆ! ಏನೀ ಹುನ್ನಾರ? ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್‌ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ.‌ ಪ್ರತಿ ಯೂನಿಟ್‌ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ ಮತ್ತು ಖಂಡನೀಯ. ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್‌ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಸೋಲಿನೊಂದಿಗೆ ಟೆನ್ನಿಸ್ ಅಂಕಣಕ್ಕೆ ಅಂತಿಮ ವಿದಾಯ ಹೇಳಿದ ರೋಜರ್ ಫೆಡರರ್

ರಾಜ್ಯ ಬಿಜೆಪಿ ಸರಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಬಿಜೆಪಿ ಸರಕಾರದ ಹಾದಿಯಲ್ಲೇ ರಾಜ್ಯ ಸರಕಾರವೂ ಸಾಗಿದೆ. ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ.  ವಿದ್ಯುತ್‌ ಸೋರಿಕೆ, ಕಳವು ತಡೆಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ಸರಕಾರ ಅದಕ್ಷತೆಯ ಆಡಂಬೋಲ. ʼಬಡವರನ್ನು ಸುಲಿದು ಬಿಸ್ನೆಸ್‌ ಕ್ಲಾಸಿನ ಜನರ ಜೇಬು ತುಂಬುʼ ಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next