Advertisement

ರಾಜ್ಯದಲ್ಲಿ ಇನ್ನೂ 14 ತಾಲೂಕು ಬರಪೀಡಿತ

06:15 AM Oct 16, 2018 | |

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಹದಿನಾಲ್ಕು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇದರಿಂದಾಗಿ ಈಗಾಗಲೇ ಘೋಷಿತವಾಗಿರುವ 86 ತಾಲೂಕುಗಳು ಸೇರಿ ಒಟ್ಟು 100 ತಾಲೂಕುಗಳು ಬರಪೀಡಿತವಾಗಿವೆ.

Advertisement

ಆನೇಕಲ್‌,ದೇವನಹಳ್ಳಿ, ದೊಡ್ಡಬಳ್ಳಾಪುರ,ತುರುವೇಕೆರೆ, ಹೊಳಲ್ಕೆರೆ, ಹೊಸದುರ್ಗ, ದಾವಣಗೆರೆ,ಜಗಳೂರು, ಪಾಂಡವಪುರ, ಔರಾದ್‌, ಬಸವಕಲ್ಯಾಣ, ಅಥಣಿ, ಬೀಳಗಿ ಮತ್ತು ಮುಧೋಳ ತಾಲೂಕುಗಳನ್ನು ಹೊಸದಾಗಿ ಬರಪೀಡಿತ ಎಂದು ಘೋಷಿಸಲಾಗಿದೆ.

ಕೇಂದ್ರ ಸರ್ಕಾರವು ಪ್ರಕಟಿಸಿರುವ 2016ರ ಬರ ಕೈಪಿಡಿ ಮತ್ತು ಪರಿಷ್ಕೃತ ಮಾರ್ಗಸೂಚಿಯಂತೆ ಈ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ. 

ಈ ತಾಲೂಕುಗಳಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉದ್ಯೋಗ ಒದಗಿಸುವುದು, ಕುಡಿಯುವ ನೀರು ಪೂರೈಕೆ, ಜಾನುವಾರುಗಳಿಗೆ ಮೇವು ಮುಂತಾದ ಬರ ಪರಿಹಾರ ಕಾಮಗಾರಿ ಕೈಗೊಳ್ಳಲಾಗುವುದು. ಜತೆಗೆ ಬೆಳೆಹಾನಿ ಸಮೀಕ್ಷೆಗೂ ಸಂಬಂಧಪಟ್ಟ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next