ನವದೆಹಲಿ: ಕಳೆದ ಏಳು ವರ್ಷಗಳಲ್ಲಿ ದೇಶದಲ್ಲಿ ಬಹಳಷ್ಟು ಬದಲಾವಣೆಯಾಗಿದೆ. ನಮ್ಮನ್ನು ವಿರೋಧಿಸುವವರು ಕೂಡಾ ಇನ್ನು ಒಪ್ಪಿಕೊಳ್ಳುತ್ತಾರೆ. ಕೇಂದ್ರ ಸರ್ಕಾರ ತೆಗೆದುಕೊಂಡ ಕೆಲವು ತಪ್ಪು ನಿರ್ಧಾರಗಳನ್ನು ತೆಗೆದುಕೊಂಡಿರಬಹುದು. ಆದರೆ ಯಾರೊಬ್ಬರೂ ಕೇಂದ್ರದ ಉದ್ದೇಶ ತಪ್ಪು ಎಂಬುದಾಗಿ ಹೇಳಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ವಿಶ್ವದ ಅತ್ಯಂತ ಮೆಚ್ಚುಗೆಯ ಕ್ರೀಡಾಪಟು ಸಮೀಕ್ಷೆ: 3ನೇ ಸ್ಥಾನದಲ್ಲಿ ಸಚಿನ್
ಏಳು ವರ್ಷಗಳಲ್ಲಿ ದೇಶದಲ್ಲಿ ಬಹಳಷ್ಟು ಅಭಿವೃದ್ಧಿಯಾಗಿದೆ. ನಮ್ಮ ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪವಿಲ್ಲ. ಕೆಲವೊಂದು ತಪ್ಪು ನಿರ್ಧಾರಗಳನ್ನು ತೆಗೆದುಕೊಂಡಿರಬಹುದು. ಆದರೆ ನಮ್ಮ ಉದ್ದೇಶ ತಪ್ಪು ಎಂದು ಯಾರೂ ಹೇಳಲು ಸಾಧ್ಯವಿಲ್ಲ.
ಬಹು ಪಕ್ಷೀಯ ಪ್ರಜಾತಂತ್ರ ವ್ಯವಸ್ಥೆ ಬಗ್ಗೆ ಜನರು ಹೊಂದಿದ್ದ ನಂಬಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿ ಪುನರ್ ಸ್ಥಾಪನೆಗೊಂಡಿರುವುದಾಗಿ ಅಮಿತ್ ಶಾ ಹೇಳಿದರು. ಯುಪಿಎ ಆಡಳಿತಾವಧಿಯನ್ನು ಟೀಕಿಸಿದ ಶಾ, ಪ್ರಜಾತಂತ್ರ ವ್ಯವಸ್ಥೆ ಬಗ್ಗೆ ಜನರು ನಂಬಿಕೆಯನ್ನು ಕಳೆದುಕೊಳ್ಳಲು ಆರಂಭಿಸಿದ್ದರು. ಜನರು ಕೂಡಾ ಒಂದು ನಮ್ಮ ಬಹು ಪಕ್ಷೀಯ ಪ್ರಜಾತಂತ್ರ ವ್ಯವಸ್ಥೆ ವಿಫಲವಾಗುತ್ತಿದೆಯೇ ಎಂದು ಅಚ್ಚರಿಗೊಂಡಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಬಹುಪಕ್ಷೀಯ ಪ್ರಜಾತಂತ್ರ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಮೂಲಕ ಸಾರ್ವಜನಿಕರ ನಂಬಿಕೆಯನ್ನು ಇಮ್ಮಡಿಗೊಳಿಸಿರುವುದಾಗಿ ತಿಳಿಸಿದರು.
ಇಂದು(ಡಿಸೆಂಬರ್ 17) ಅಮಿತ್ ಶಾ ಅವರು ಲಕ್ನೋದ ರಮಾಬಾಯಿ ಅಂಬೇಡ್ಕರ್ ಮೈದಾನದಲ್ಲಿ “ಸರ್ಕಾರ ರಚಿಸಿ, ಅಧಿಕಾರ ಪಡೆಯಿರಿ” ಎಂಬ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಲಿಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ನಿಷಾದ್ ಪಕ್ಷದ ಅಧ್ಯಕ್ಷ ಸಂಜಯ್ ನಿಷಾದ್, ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಭಾಗವಹಿಸಲಿದ್ದಾರೆ.