ಬೆಂಗಳೂರು: “ಕಳೆದ ಐದು ವರ್ಷದಿಂದ ದೇಶದಲ್ಲಿ ಬಿಜೆಪಿಯವರು ಅಧಿಕಾರದಲ್ಲಿರುವ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸುತ್ತಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ, ಬಿಜೆಪಿಯವರು ಆಂಧ್ರಪ್ರದೇಶ, ತೆಲಂಗಾಣದಲ್ಲಿ ಅದನ್ನೇ ಮಾಡಿದ್ದರು. ಕರ್ನಾಟದಲ್ಲಿ ಐಟಿ, ಇಡಿ, ಸಿಬಿಐ ಬಳಸಿಕೊಂಡು ಶಾಸಕರಿಗೆ ಬೆದರಿಕೆ ಹಾಕಿ ರಾಜೀನಾಮೆ ನೀಡುವಂತೆ ಒತ್ತಡ ಹೇರುತ್ತಿದ್ದಾರೆ.
ಪಕ್ಷದ ಎಲ್ಲ ಸಚಿವರು ಸರ್ಕಾರ ರಕ್ಷಿಸಲು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆ. ಸರ್ಕಾರ ಹಾಗೂ ಪಕ್ಷ ಉಳಿಸಲು ಸಚಿವರು ಸ್ಥಾನ ತ್ಯಾಗ ಮಾಡಿರುವುದು ಒಳ್ಳೆಯ ಬೆಳವಣಿಗೆ. ಮುಂಬೈಗೆ ತೆರಳಿರುವ ಶಾಸಕರು ವಾಪಸ್ ಬಂದರೆ, ಅವರೊಂದಿಗೆ ಎಲ್ಲ ವಿಷಯ ಚರ್ಚಿಸಲು ನಾವು ಸಿದ್ಧರಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್‌ನಿಂದ ಬಂಡಾಯವೆದ್ದು ಮುಂಬೈ ಹೋಟೆಲ್‌ನಲ್ಲಿ ಬೀಡು ಬಿಟ್ಟಿರುವ ಶಾಸಕರನ್ನು ವಾಪಸ್ ಕರೆದುಕೊಂಡು ಬಂದು ಸರ್ಕಾರ ಉಳಿಸುವ ಪ್ರಯತ್ನ ಮಾಡುತ್ತೇವೆ. ಬಿಜೆಪಿಯನ್ನ ಅಧಿಕಾರದಿಂದ ದೂರ ಇಡಬೇಕು ಎಂದರೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಬೇಕು. ಹಾಗಾದರೆ ಮಾತ್ರ ಸಮ್ಮಿಶ್ರ ಸರ್ಕಾರ ಉಳಿಯಲಿದೆ.
-ಕೆ.ಎನ್.ರಾಜಣ್ಣ ಮಾಜಿ ಶಾಸಕ