Advertisement
ಕೇಂದ್ರ ಸರಕಾರ ಕೃಷಿ ಕಾಯ್ದೆ ಹಿಂದಕ್ಕೆ ಪಡೆದಿರುವ ವಿಷಯವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಕಳೆದ 7 ವರ್ಷದಲ್ಲಿ ಚುನಾವಣೆ ಗಮನದಲ್ಲಿಟ್ಟುಕೊಂಡು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಕೃಷಿಗೆ ಸಂಬಂಧಿಸಿದಂತೆ ರೂಪಿಸಿರುವ ಮೂರು ಕಾಯ್ದೆಗಳು ರೈತಪರವಾಗಿವೆ. ಅದರ ಪ್ರಯೋಜನಗಳನ್ನು ರೈತರಿಗೆ ಪರಿಣಾಮ ಕಾರಿಯಾಗಿ ತಿಳಿಸುವುದರಲ್ಲಿ ಕೊರತೆಯಾಗಿದೆ. ಹೀಗಾಗಿ ಕಾಯ್ದೆ ವಾಪಸ್ ಪಡೆಯಲಾಗಿದೆ ಎಂದು ಸ್ವತಃ ಮೋದಿಯವರೇ ಹೇಳಿದ್ದಾರೆ. ರೈತ ಪರವಾಗಿರುವ ಕಾರಣಕ್ಕೆ ರೈತರ ಭಾವನೆ ಅರ್ಥಮಾಡಿಕೊಂಡಿದ್ದೇವೆ. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದೆ ಏನು ಮಾಡಬೇಕು ಎಂಬುದನ್ನು ಕೇಂದ್ರ ಸರಕಾರ ಯೋಚಿಸಲಿದೆ ಎಂದರು.
Related Articles
– ಹಾಲಾಡಿ ಶ್ರೀನಿವಾಸ ಶೆಟ್ಟಿ, ಶಾಸಕ
Advertisement
ಮೂರು ಕಾಯ್ದೆಗಳೂ ರೈತರ ಪರವಾಗಿವೆ. ರೈತರ ಆದಾಯ ದ್ವಿಗುಣ ಮಾಡಲು ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದ್ದೆವು. ರೈತರಿಗೆ ಇನ್ನಷ್ಟು ಅನುಕೂಲ ಮಾಡಿಕೊಟ್ಟು, ರೈತರೊಂದಿಗೆ ಪ್ರಧಾನಿ ಮೋದಿ ಸರಕಾರ ಇರಲಿದೆ.– ಡಿ.ವಿ. ಸದಾನಂದ ಗೌಡ,
ಕೇಂದ್ರದ ಮಾಜಿ ಸಚಿವ