Advertisement
ಹಾಗೆ ನೋಡಿದರೆ ಹಿಂದಿನ ಚುನಾವಣೆಗಳಿಗಿಂತ ಈ ಬಾರಿ ಸಿನೆ ತಾರೆಯರ ದಂಡು ಕಡಿಮೆಯೇ. ಆದರೂ ಈ ಚುನಾವಣೆಯಲ್ಲಿ ಕೆಲವು ಸಿನೆ ತಾರೆಯರು ಸ್ವತಃ ಆಕಾಂಕ್ಷಿಗ ಳಾಗಿದ್ದರೆ, ಇನ್ನು ಹಲವರು ರಾಜಕೀಯ ಪಕ್ಷವನ್ನೇ ಸ್ಥಾಪಿಸಿ ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಉತ್ಸಾಹದಲ್ಲಿದ್ದಾರೆ. ಇದರಿಂದ ಚುನಾವಣೆ ಮತ್ತಷ್ಟು ರಂಗೇರುತ್ತಿದೆ.
ಈ ಪೈಕಿ ರಿಯಲ್ ಸ್ಟಾರ್ ಉಪೇಂದ್ರ ಅವರು ಉತ್ತಮ ಪ್ರಜಾಕೀಯ ಪಕ್ಷ ಸ್ಥಾಪಿಸಿದ್ದಾರೆ. 2018ರಲ್ಲಿ ಅಸ್ತಿತ್ವಕ್ಕೆ ಬಂದ ಈ ಪಕ್ಷವು 2019ರ ಲೋಕಸಭಾ ಚುನಾವಣೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಿತ್ತು. ಆದರೆ ಉಪೇಂದ್ರ ಅವರು ಸ್ಪರ್ಧೆ ಮಾಡಿರಲಿಲ್ಲ. ಶೀಘ್ರದಲ್ಲಿಯೇ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಉತ್ಸಾಹದಲ್ಲಿದೆ. ಸಾಮಾಜಿಕ ಜಾಲತಾಣದಲ್ಲಿ ಪಕ್ಷದ ಸಂಸ್ಥಾಪಕರು ಕ್ರಿಯಾಶೀಲವಾಗಿ ಆಗಾಗ್ಗೆ ಪೋಸ್ಟ್‌ಗಳನ್ನು ಹಾಕಿ ಗಮನಸೆಳೆಯುವುದನ್ನು ಕಾಣಬಹುದು.
Related Articles
Advertisement
ಶಶಿಕುಮಾರ್ ರಿ ಎಂಟ್ರಿ: ಮತ್ತೊಂದೆಡೆ ಕೋಟೆನಾಡಿನಿಂದ ನಟ ಮತ್ತು ಮಾಜಿ ಸಂಸದ ಶಶಿಕುಮಾರ್ ರಿ-ಎಂಟ್ರಿ ಯಾಗುತ್ತಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಅಥವಾ ಚಳ್ಳಕೆರೆಯಿಂದ ಬಿಜೆಪಿಯಿಂದ ಕಣಕ್ಕಿಳಿಯಲು ಪ್ರಯತ್ನ ನಡೆಸಿದ್ದಾರೆ. ಶಶಿಕುಮಾರ್ 1999ರಲ್ಲಿ ಚಿತ್ರದುರ್ಗದ ಸಂಸದರಾಗಿದ್ದರು. 2008ರಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ತಿಪ್ಪೇಸ್ವಾಮಿ ವಿರುದ್ಧ ಸೋಲನುಭವಿಸಿದ್ದರು.ಅದೇ ರೀತಿ ನಟಿ ಮತ್ತು ಮಾಜಿ ಸಚಿವೆ ಉಮಾಶ್ರೀ ತೇರದಾಳದಿಂದ ಕಾಂಗ್ರೆಸ್‌ನಿಂದ ಆಕಾಂಕ್ಷಿಯಾಗಿದ್ದು, ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದಾರೆ. 2013ರ ಚುನಾವಣೆಯಲ್ಲಿ ತೇರದಾಳದಿಂದ ಗೆದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದರು. 2018ರಲ್ಲಿ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ವಿಧಾನ ಪರಿಷತ್ತಿನ ಮಾಜಿ ಸದಸ್ಯೆ ತಾರಾ ಅನುರಾಧ ಬಿಜೆಪಿಯಿಂದ ಜಯನಗರದಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಇದಕ್ಕಾಗಿ ಟಿಕೆಟ್ ಗಿಟ್ಟಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಆರಂಭದಿಂದಲೂ ಬಿಜೆಪಿಯಲ್ಲಿ ಗುರುತಿಸಿ ಕೊಂಡಿರುವ ಅವರು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2012ರಿಂದ 2018ರ ಅವಧಿಯಲ್ಲಿ ಮೇಲ್ಮನೆ ಸದಸ್ಯೆಯೂ ಆಗಿದ್ದರು. ಇನ್ನು ನಟಿ ಭಾವನಾ ಯಶವಂತಪುರ ಕ್ಷೇತ್ರದ ಕಾಂಗ್ರೆಸ್‌ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಹಿಂದೆ ಅವರು ಆ ಪಕ್ಷದ ಸ್ಟಾರ್ ಪ್ರಚಾರಕರಾಗಿ ಕಾರ್ಯ ನಿರ್ವಹಿಸಿದ್ದರು. ಗೋಲ್ಡನ್ ಸ್ಟಾರ್ ಗಣೇಶ್ ಅವರ ಪತ್ನಿ ಶಿಲ್ಪಾ ಗಣೇಶ್ ಮತ್ತು ನಟಿ ರೂಪಾ ಅಯ್ಯರ್, ಜಯನಗರ ಅಥವಾ ಬಸವನಗುಡಿಯಿಂದ ಬಿಜೆಪಿಯಿಂದ ಕಣಕ್ಕಿಳಿಯುವ ಕಸರತ್ತು ನಡೆಸಿದ್ದಾರೆ. ಈ ಮಧ್ಯೆ ಆಮ್ ಆದ್ಮಿ ಪಕ್ಷದಿಂದ ಪೋಷಕ ನಟ “ಮುಖ್ಯಮಂತ್ರಿ’ ಚಂದ್ರು ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಆದರೆ ಕ್ಷೇತ್ರ ಇನ್ನೂ ಅಂತಿಮವಾಗಿಲ್ಲ. ಕನ್ನಡ ಅಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಆಪ್‌ಗೆ ಜಿಗಿದಿದ್ದಾರೆ. ಹಾಸ್ಯನಟ ಸಾಧು ಕೋಕಿಲಾ ಅಧಿಕೃತವಾಗಿ ಈಚೆಗೆ ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ಅವರನ್ನು ನೇಮಕ ಮಾಡಲಾಗಿದೆ. ನಟಿ ಶೃತಿ ಕೂಡ ಬಿಜೆಪಿಯಲ್ಲಿದ್ದಾರೆ. ನಟಿ ಮಾಳವಿಕಾ ಅವಿನಾಶ್ ಬಿಜೆಪಿ ರಾಜ್ಯ ವಕ್ತಾರೆಯಾಗಿ ಕಾರ್ಯನಿರ್ವ ಹಿಸುತ್ತಿದ್ದಾರೆ. ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ರುವ ಸುನೀಲ್ ಪುರಾಣಿಕ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ನಟ ಮತ್ತು ರಾಜ್ಯಸಭೆ ಸದಸ್ಯ ಜಗ್ಗೇಶ್ ಸುಮಾರು ಎರಡು ದಶಕಗಳಿಂದ ರಾಜಕೀಯದಲ್ಲಿದ್ದಾರೆ. ರಮ್ಯಾ ಈ ಹಿಂದೆ ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಈ ಹಿಂದೆ ಯಶವಂತಪುರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಇನ್ನು ಶಾಸಕ ಕುಮಾರ ಬಂಗಾರಪ್ಪ, ಮಾಜಿ ಶಾಸಕ ಸಿ.ಪಿ. ಯೋಗೇಶ್ವರ, ಮಧು ಬಂಗಾರಪ್ಪ ಮತ್ತಿತರರು ಚಿತ್ರರಂಗದಿಂದ ಬಹುತೇಕ ದೂರ ಉಳಿದಿದ್ದು, ರಾಜಕಾರಣದಲ್ಲಿ ಹೆಚ್ಚು ಸಕ್ರಿಯವಾಗಿದ್ದಾರೆ. -ವಿಜಯಕುಮಾರ ಚಂದರಗಿ