Advertisement

ಕರಾವಳಿಯಲ್ಲಿ ಮೂರು ದಿನ ಮಳೆ ಸಾಧ್ಯತೆ

01:21 AM Apr 28, 2019 | Sriram |

ಮಂಗಳೂರು: ಬಂಗಾಲ ಕೊಲ್ಲಿಯಲ್ಲಿ ಉಂಟಾಗಿರುವ “ಫೋನಿ’ ಚಂಡಮಾರುತದ ಪರಿಣಾಮವಾಗಿ ಕರಾವಳಿಯಲ್ಲಿ ಎ. 29ರಿಂದ ಮೂರು ದಿನ ರಾಜ್ಯದ ದಕ್ಷಿಣ ಒಳನಾಡು ಸಹಿತ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

“ಫೋನಿ’ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ತೀವ್ರ ಸ್ವರೂಪ ಪಡೆಯಲಿದೆ. ಎ. 30ರ ವೇಳೆಗೆ ತೀವ್ರ ಸ್ವರೂಪದ ಚಂಡಮಾರುತವಾಗಲಿದೆ. ಅನಂತರ ಕ್ರಮೇಣ ಅದರ ವೇಗ ಕಡಿಮೆಯಾಗಲಿದೆ.

ಈ ಚಂಡಮಾರುತದ ಪ್ರಭಾವ ದಿಂದ ಎ. 29, 30ರಂದು ಕೇರಳ, ತಮಿಳುನಾಡು ಕರಾವಳಿ ಪ್ರದೇಶದಲ್ಲಿ ಮತ್ತು ಎ. 30 ಮತ್ತು ಮೇ 1ರಂದು ಆಂಧ್ರಪ್ರದೇಶದ ಕರಾವಳಿ ತೀರದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಕಡಲು ಕೂಡ ಕೆಲವು ಕಡೆಗಳಲ್ಲಿ ಪ್ರಕ್ಷುಬ್ಧಗೊಳ್ಳುವ ಸಂಭವವಿದೆ.

ಈ ವೇಳೆ ರಾಜ್ಯ ಕರಾವಳಿ ಪ್ರದೇಶದಲ್ಲಿ ಗಾಳಿಯ ವೇಗ ಕೂಡ ಹೆಚ್ಚಾಗಲಿದ್ದು, ಜಿಲ್ಲೆಯಲ್ಲಿ ಸುಮಾರು 20ರಿಂದ 30 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ. ಮೂರು ದಿನಗಳ ಕಾಲ ಸಮುದ್ರದ ಅಬ್ಬರ ಇರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next