Advertisement

ಪ್ರತ್ಯೇಕ ಧರ್ಮದ ಬಗ್ಗೆ ಸ್ಪಷ್ಟತೆ ಇದೆ: ಸಚಿವ ಶ‌ರಣ ಪ್ರಕಾಶ್‌

06:25 AM Sep 16, 2017 | Team Udayavani |

ಬೆಂಗಳೂರು: ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಂತ್ರ ಧರ್ಮವಾಗಬೇಕು ಎಂಬ ಬಗ್ಗೆ ಸ್ಪಷ್ಟತೆಯಿದ್ದು, ಯಾವ ಹೆಸರಿನಲ್ಲಿ ಧರ್ಮವಾಗಬೇಕು ಎಂಬ ಬಗ್ಗೆ ಸಮಿತಿಯ ನಿರ್ಣಯದಂತೆ ಮುಂದುವರಿಯಲಾಗುವುದು ಎಂದು ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌ ಹೇಳಿದರು.

Advertisement

ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ಪ್ರತ್ಯೇಕ ಧರ್ಮ ವಿಚಾರದಲ್ಲಿ ಯಾವುದೇ ವಿವಾದವಿಲ್ಲ. ಎಲ್ಲರೂ ಒಟ್ಟಿಗೆ ಮುಂದುವರಿಯಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಹೇಳಿಕೆ ಸಂಬಂಧ ಯಾವುದೇ ವಿವಾದವೂ ಇಲ್ಲ. ಹಿನ್ನಡೆಯೂ ಆಗಿಲ್ಲ. ಸ್ವತಂತ್ರ ಧರ್ಮವಾಗಬೇಕು ಎಂಬುದಕ್ಕೆ ಯಾವುದೇ ಹಿನ್ನಡೆಯಾಗಿಲ್ಲ. ಸದ್ಯದಲ್ಲೇ ಸಭೆ ಸೇರಿ ಸಮಿತಿ ರಚನೆಗೆ ಚರ್ಚಿಸಿ ಮುಂದುವರಿಯಲಾಗುವುದು ಎಂದು ಹೇಳಿದರು.

ಪ್ರತ್ಯೇಕ ಧರ್ಮಕ್ಕೆ ವೀರ ಲಿಂಗಾಯತ ಎಂಬ ಹೆಸರಿಡಬೇಕು ಎಂಬ ಸಚಿವ ಬಸವರಾಜ ರಾಯರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿರುತ್ತದೆ. ಸಮಾಜದಲ್ಲಿ ಒಮ್ಮತದಿಂದ ಕೈಗೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಿರಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next