Advertisement

ಸಚಿವ ಸ್ಥಾನ ದೊರಕುವ ವಿಶ್ವಾಸವಿದೆ: ಪರಮೇಶ್ವರ ನಾಯ್ಕ

06:50 AM Dec 08, 2018 | Team Udayavani |

ಹರಪನಹಳ್ಳಿ: ಮೈತ್ರಿ ಸರಕಾರದ ಸಂಪುಟ ವಿಸ್ತರಣೆಯಲ್ಲಿ ಪಕ್ಷದ ವರಿಷ್ಠರು ಬಳ್ಳಾರಿ ಜಿಲ್ಲೆಗೆ ಆದ್ಯತೆ ನೀಡಲಿದ್ದಾರೆ. ನಾನೂ ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಸಚಿವ ಸ್ಥಾನ ದೊರಕುವ ವಿಶ್ವಾಸವಿದೆ ಎಂದು ಮಾಜಿ ಸಚಿವ, ಹೂವಿನಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ವಿಶ್ವಾಸ ವ್ಯಕ್ತಪಡಿಸಿದರು.

Advertisement

ತಾಲೂಕಿನ ಉಚ್ಚಂಗಿದುರ್ಗ ಗ್ರಾಮದ ಉಚ್ಚೆಂಗೆಮ್ಮ ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಮ್ಮಿಶ್ರ ಸರ್ಕಾರದಲ್ಲಿ ಲಂಬಾಣಿ ಶಾಸಕರನ್ನು ನಿರ್ಲಕ್ಷಿಸಲಾಗುತ್ತಿದೆ ಎನ್ನುವುದು ಸರಿಯಲ್ಲ. ಜಾತಿ ಲಾಬಿ ನಡೆಸುವ ಅಗತ್ಯವಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದೇನೆ ಎಂದರು.
 

Advertisement

Udayavani is now on Telegram. Click here to join our channel and stay updated with the latest news.

Next