ಮೈಸೂರು: ಲಿಂಗಾಯತರಲ್ಲಿ ಪರ್ಯಾಯ ನಾಯಕರಿಲ್ಲ ಎನ್ನುವುದು ಸುಳ್ಳು ಎಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಯಡಿಯೂರಪ್ಪ ಲಿಂಗಾಯತ ಸಮುದಾಯದಲ್ಲಿ ಅತಿ ಎತ್ತರದ ನಾಯಕರು. ಅದರಲ್ಲಿ ಅನುಮಾನವಿಲ್ಲ. ಆದರೆ ಅವರ ನಂತರ ಪರ್ಯಾಯ ನಾಯಕರಿಲ್ಲ ಎಂಬುದನ್ನು ನಾನು ಒಪ್ಪುವುದಿಲ್ಲ. ಸೆಕೆಂಡ್ ಲೈನ್ ನಲ್ಲಿ ಬಹಳಷ್ಟು ನಾಯಕರಿದ್ದಾರೆ ಎಂದರು.
ಕಾಂಗ್ರೆಸ್ ನಲ್ಲಿ ನಾನು, ಶರಣಪ್ರಕಾಶ ಪಾಟೀಲ್, ಈಶ್ವರ ಖಂಡ್ರೆ ಸೇರಿದಂತೆ ಹಲವು ನಾಯಕರಿದ್ದೇವೆ. ಬಿಜೆಪಿಯಲ್ಲಿ ಜಗದೀಶ್ ಶೆಟ್ಟರ್, ಉಮೇಶ್ ಕತ್ತಿ, ಯತ್ನಾಳ್, ವಿ.ಸೋಮಣ್ಣ, ಅರವಿಂದ್ ಬೆಲ್ಲದ್ ಸೇರಿ ಅನೇಕರಿದ್ದಾರೆ. ಎಲ್ಲರೂ ಸಿಎಂ ಸ್ಥಾನಕ್ಕೆ ಅರ್ಹರಿದ್ದಾರೆ ಎಂದರು.
ಇದನ್ನೂ ಓದಿ:ಯೋಗೇಶ್ವರ್ ದೆಹಲಿ ಭೇಟಿ ನಿಗೂಢ; ಯಾರನ್ನೂ ಭೇಟಿಯಾಗದೆ ವಾಪಾಸು ಬಂದ ಸಚಿವ
ನಾವೇ ಮುಖ್ಯಮಂತ್ರಿ ಅಂತ ಸೆಲ್ಪ್ ಡಿಕ್ಲೇರ್ ಮಾಡಿಕೊಳ್ಳುವುದು ಸರಿಯಲ್ಲ. ಡಿಕ್ಲೇರ್ ಮಾಡಿಕೊಂಡವರೆಲ್ಲ ಸಿಎಂ ಆಗುವುದಿಲ್ಲ. ಯಾರು ಸಿಎಂ ಆಗಬೇಕು ಎಂಬುದನ್ನು ಜನ ತೀರ್ಮಾನ ಮಾಡಬೇಕು. ಪಕ್ಷ ಅಧಿಕಾರಕ್ಕೆ ಬರಬೇಕು ಬಳಿಕ ಹೈಕಮಂಡ್ ನಿರ್ಧಾರ ಮಾಡುತ್ತದೆ ಎಂದು ಎಂ.ಬಿ.ಪಾಟೀಲ್ ಹೇಳಿದರು