Advertisement
ರಾಜ್ಯ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಪಕ್ಷದ ಮಾಧ್ಯಮ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಸರ್ಕಾರ ರಚನೆಯಾಗಿ 9 ತಿಂಗಳ ಕಳೆದಿದ್ದು, ಒಂದೂ ಸಾಧನೆ ಮಾಡಿಲ್ಲ. ಒಂಬತ್ತು ತಿಂಗಳಲ್ಲಿ ಸುಗಮವಾಗಿ ಹೆರಿಗೆಯಾಗಿ ಮಗು ಜನಿಸುತ್ತದೆ. ಆದರೆ ಒಂಬತ್ತು ತಿಂಗಳಾದರೂ ಒಂದೂ ಜನಪರ ಕಾರ್ಯಕ್ರಮವನ್ನು ಜಾರಿಗೊಳಿಸಿಲ್ಲ ಎಂದು ತಿಳಿಸಿದರು.
Related Articles
Advertisement
ನಿರ್ಭಯಾ ಯೋಜನೆಯಡಿ ಬೆಂಗಳೂರಿನಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಕೇಂದ್ರ ಸರ್ಕಾರ 940 ಕೋಟಿ ರೂ. ಬಿಡುಗಡೆ ಮಾಡಿದ್ದರೂ ಎಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳು ಕಾಣಿಸುತ್ತಿಲ್ಲ. ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ದೇಶದಿಂದ ಹೊರಹಾಕುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಆದರೆ ರಾಜ್ಯ ಸರ್ಕಾರ ಅಕ್ರಮ ಬಾಂಗ್ಲಾ ವಲಸಿಗರಿಗೆ ಮತದಾರರ ಗುರುತಿನ ಚೀಟಿ ನೀಡಿ ಮತದಾರರ ಪಟ್ಟಿಗೆ ಹೆಸರು ಸೇರಿಸಿದೆ ಎಂದು ಕಿಡಿ ಕಾರಿದರು.
ಕಾಶ್ಮೀರದಲ್ಲಿ ಉಗ್ರಗಾಮಿಗಳು ಅಡಗಿಕೊಂಡಿದ್ದಾಗ ಅಂದಿನ ಯುಪಿಎ ಸರ್ಕಾರ ಅವರಿಗೆ ಬಿರಿಯಾನಿ ಕಳುಹಿಸಿಕೊಟ್ಟಿತ್ತು. ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕರಿಗೆ ರಕ್ಷಣೆ ಒದಗಿಸಿತ್ತು. ಆದರೆ ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಭಯೋತ್ಪಾದಕರಿಗೆ ಎಂತಹ ಟ್ರೀಟ್‌ಮೆಂಟ್ ಕೊಟ್ಟಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.
ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಮಾತನಾಡಿ, 2004ರಿಂದ 2014ರವರೆಗಿನ ಅವಧಿಯಲ್ಲಿ ಅಂದಿನ ಯುಪಿಎ ಕೇಂದ್ರ ಸರ್ಕಾರವು ಭ್ರಷ್ಟಾಚಾರದಲ್ಲೇ ಮುಳುಗಿ ಎಲ್ಲ ಕ್ಷೇತ್ರಗಳಲ್ಲಿ ವಿಫಲವಾಗಿತ್ತು. ಇದು ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರು ದೇಶಕ್ಕೆ ನೀಡಿದ ಕೊಡುಗೆಯಾಗಿದೆ. ಇತ್ತೀಚೆಗೆ ಪ್ರಿಯಾಂಕಾ ವಾದ್ರಾ ಅವರು ಚುನಾವಣಾ ರಂಗಕ್ಕೆ ಪ್ರವೇಶಿಸುವ ಮೂಲಕ ರಾಬರ್ಟ್ ವಾದ್ರಾ ಭ್ರಷ್ಟಾಚಾರವನ್ನು ರಕ್ಷಿಸಲು ಮುಂದಾಗಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.
ಮಾಧ್ಯಮ ನಿರ್ವಹಣಾ ವಿಭಾಗದ ಸಂಚಾಲಕ ಎ.ಎಚ್.ಆನಂದ್, ಸಹ ವಕ್ತಾರರಾದ ಎಸ್.ಪ್ರಕಾಶ್, ಮಾಳವಿಕಾ ಅವಿನಾಶ್, ಶಶಿಲ್ ನಮೋಶಿ, ಮಾಧ್ಯಮ ವಿಭಾಗದ ಪದಾಧಿಕಾರಿಗಳು, ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದರು.