Advertisement

ವೇತನ ತಾರತಮ್ಯ ಸರಿಪಡಿಸುವ ಬಗ್ಗೆ ಬಜೆಟ್‌ನಲ್ಲಿ ಉತ್ತರವಿಲ್ಲ

07:51 PM Mar 05, 2022 | Team Udayavani |

ಬೆಂಗಳೂರು: ಶಿಕ್ಷಕರ ಮತ್ತು ಉಪನ್ಯಾಸಕರ ವೇತನ ತಾರತಮ್ಯ ಸರಿಪಡಿಸುವ ಬಗ್ಗೆ ಬಜೆಟ್‌ನಲ್ಲಿ ಉತ್ತರವಿಲ್ಲ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ವಕ್ತಾರ ರಮೇಶ್‌ ಬಾಬು ಹೇಳಿದ್ದಾರೆ.

Advertisement

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಅವರು ಆಯವ್ಯಯದ ಒಟ್ಟು ಹಣದಲ್ಲಿ ಶೇ.12ರಷ್ಟು ಭಾಗವನ್ನು ಶಿಕ್ಷಣಕ್ಕೆ ನೀಡಿದ್ದರೂ ಇದರಲ್ಲಿ ಶೇ.90ರಷ್ಟು ವೇತನ ಮತ್ತು ಆಡಳಿತದ ವೆಚ್ಚವಾಗಿದೆ ಎಂದು ತಿಳಿಸಿದ್ದಾರೆ.

ಶಿಕ್ಷಣ ಇಲಾಖೆ ಶೇ.15ರಷ್ಟು ಅನುದಾನ ಅಗತ್ಯವಿದ್ದು ಇದನ್ನು ರಾಜ್ಯದ ಅಭಿವೃದ್ದಿಯ ದೃಷ್ಟಿಯಿಂದ ಗಂಭೀರವಾಗಿ ಪರಿಗಣಿಸಿ ಪರಿಷ್ಕೃತ ಅಯವ್ಯಯದಲ್ಲಿ ಅವಕಾಶ ನೀಡಿ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ಹಿತಾಸಕ್ತಿ ಹಾಗೂ ಶಿಕ್ಷಣ ಇಲಾಖೆಯ ಹಿತಾಸಕ್ತಿಯನ್ನು ಸಂರಕ್ಷಿಸಬೇಕಾಗಿದೆ ಎಂದು ಹೇಳಿದ್ದಾರೆ.

ಹೊಸ ಪಿಂಚಣಿ ಯೋಜನೆ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ಜೀವನೋಪಾಯಕ್ಕೆ ಮಾರಕವಾಗಿದ್ದು ಸರ್ಕಾರ ಬಜೆಟ್‌ನಲ್ಲಿ ಹಳೆ ಪಿಂಚಣಿ ಯೋಜನೆ ಮರು ಜಾರಿ ಮಾಡುವ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಇದರಿಂದಾಗಿ ರಾಜ್ಯ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುವ ಶೇ. 50ಕ್ಕೂ ಹೆಚ್ಚು ನೌಕರರು ಅತಂತ್ರ ಪರಿಸ್ಥಿತಿಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕೈವಾರ ತಾತಯ್ಯ ಅವರ ಜನ್ಮ ದಿನವನ್ನು ಮಾ.27ರಂದು ಪ್ರತಿ ವರ್ಷ ಸರ್ಕಾರದ ವತಿಯಿಂದ ಆಚರಿಸಲಾಗುವುದು ಎಂದು ಸರ್ಕಾರ ಘೋಷಣೆ ಮಾಡಿರುವುದು ಸಂತಸದ ವಿಚಾರವಾಗಿದೆ. ಇದರ ಜತೆಗೆ ಕೈವಾರ ತಾತಯ್ಯನವರ ಅಧ್ಯಯನ ಪೀಠ ಸ್ಥಾಪನೆ ಮಾಡಿ ಅವರ ಪ್ರವಚನ,ಕೀರ್ತನೆ ಮತ್ತು ಗ್ರಂಥಗಳ ಸಂರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next