ಬೆಂಗಳೂರು:ಕೇಂದ್ರದ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ವಿರೋಧಿಸಿ ಮಂಗಳವಾರ ಕಾರ್ಮಿಕ ಸಂಘಟನೆಗಳು ದೇಶಾದ್ಯಂತ (ಸಿಐಟಿಯು, ಎಐಸಿಟಿಯು) ಮುಷ್ಕರಕ್ಕೆ ಕರೆ ನೀಡಿವೆ, ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ, ಆಟೋ ರಿಕ್ಷಾ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಹೊಸ ಮೋಟಾರು ವಾಹನ ಕಾಯ್ದೆ ಜಾರಿ ವಿರೋಧಿಸಿ ನೌಕರರ ಸಂಘಗಳು ಮುಷ್ಕರ ನಡೆಸುತ್ತಿರುವ ನಿಟ್ಟಿನಲ್ಲಿ ಆಟೋ, ಲಾರಿ ಚಾಲಕ, ಮಾಲಕರ ಸಂಘ ಬೆಂಬಲ ನೀಡಿವೆ.
ಕಾರ್ಮಿಕ, ನೌಕರರ ಸಂಘಟನೆಯ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದರೆ, ಕೆಎಸ್ ಆರ್ ಟಿಸಿ, ಬಿಎಂಟಿಸಿ ಹಾಗೂ ಆಟೋ ರಿಕ್ಷಾಗಳ ಸಂಚಾರ ಸ್ಥಗಿತಗೊಳ್ಳಲಿದೆ. ಮೆಟ್ರೋ ಸಂಚಾರ ಸ್ಥಗಿತದ ಕುರಿತಂತೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.