Advertisement

Karnataka 3 ವಿಧಾನಸಭೆ ಕ್ಷೇತ್ರಗಳಿಗೆ ಬೈಎಲೆಕ್ಷನ್‌ ಸದ್ಯಕ್ಕಿಲ್ಲ

12:53 AM Aug 17, 2024 | Team Udayavani |

ಹೊಸದಿಲ್ಲಿ: ಕರ್ನಾಟಕದ ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಸೇರಿದಂತೆ ದೇಶದ 46 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸದ್ಯಕ್ಕೆ ನಡೆಯುವುದಿಲ್ಲ. ಮಳೆ, ಪ್ರವಾಹದ ಕಾರಣದಿಂದಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯ ಚುನಾವಣ ಆಯುಕ್ತ ರಾಜೀವ್‌ ಕುಮಾರ್‌ ಹೇಳಿದ್ದಾರೆ.

Advertisement

ಜಮ್ಮು-ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಸಂದರ್ಭದಲ್ಲಿ ಮಾತನಾಡಿದ ಅವರು, ವಯನಾಡ್‌ನ‌ಲ್ಲಿ ಭೂಕುಸಿತ ಉಂಟಾಗಿರುವುದರಿಂದ ಅಲ್ಲಿ ತತ್‌ಕ್ಷಣವೇ ಚುನಾವಣೆ ನಡೆಸಲು ಸಾಧ್ಯವಿಲ್ಲ. ಬಿಹಾರ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ ಎಲ್ಲ 46 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಉಪ ಚುನಾವಣೆಯನ್ನು 6 ತಿಂಗಳ ಒಳಗಾಗಿ ನಡೆಸಲಾಗುತ್ತದೆ ಎಂದರು. ಭದ್ರತಾ ವ್ಯವಸ್ಥೆ, ಹವಾಮಾನ ಸೇರಿದಂತೆ ಹಲವು ಕಾರಣಗಳಿಂದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದಿನಾಂಕ ಬಳಿಕ ಪ್ರಕಟಿಸಲಾಗುತ್ತದೆ ಎಂದರು. ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ರಾಯ್‌ಬರೇಲಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದಿದ್ದ ಕಾರಣ ವಯನಾಡ್‌ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next