Advertisement
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಗುರುವಾರ ಸ್ಮಾರ್ಟ್‌ಸಿಟಿ ಸಲಹಾ ಸಮಿತಿ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪರಿಯಿದು.
Related Articles
Advertisement
ಒಂದು ವರ್ಷದ ಹಿಂದೆ ಕಾಮಗಾರಿಗಳು ಆರಂಭಗೊಂಡಿದ್ದರೂ ದಾವಣಗೆರೆ ಹಳೇ ಭಾಗದ ಕಾಮಗಾರಿಗಳು ಮುಕ್ತಾಯಗೊಳ್ಳದಿರುವ ಬಗ್ಗೆ ಶಾಮನೂರು ಶಿವಶಂಕರಪ್ಪ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಿಗದಿತ ಅವಧಿಯೊಳಗೆ ಮುಗಿಸಲು ವಿಳಂಬ ಏಕೆ ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಪ್ರಶ್ನಿಸಿದರು.
ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಅಸಡ್ಡೆಯಿಂದಾಗಿ ಕಾಮಗಾರಿಗಳನ್ನು ಗುತ್ತಿಗೆ ನೀಡುವ ವೇಳೆ ತಾಂತ್ರಿಕ ತೊಂದರೆ ನಿವಾರಿಸದೆ ಇರುವುದರಿಂದ ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸಲಾಗುತ್ತಿಲ್ಲ ಎಂದು ಸ್ಮಾರ್ಟ್‌ಸಿಟಿ ಯೋಜನೆ ನಿರ್ದೇಶಕ ಶಿವನಹಳ್ಳಿ ರಮೇಶ್ ದೂರಿದರು.
ಏನೇ ಸಮಸ್ಯೆ ಇದ್ದರೂ ಇದೀಗ ಆರಂಭಗೊಂಡಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಮುಗಿಸಬೇಕು. ಮುಂದೆ ಸ್ಮಾರ್ಟ್‌ಸಿಟಿಯ ಯಾವುದೇ ಕಾಮಗಾರಿಗಳು ವಿಳಂಬ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಮಿತಿ ಸೂಚಿಸಿತು.
ಮೇಯರ್ ಶೋಭಾ ಪಲ್ಲಾಗಟ್ಟೆ, ಮಾಜಿ ಮೇಯರ್ ಅನಿತಾ ಮಾಲತೇಶ್ ಜಾಧವ್, ದಿನೇಶ್ ಕೆ. ಶೆಟ್ಟಿ, ನಿರ್ದೇಶಕರಾದ ಅಥಣಿ ಎಸ್. ವೀರಣ್ಣ, ಡಾ| ಎಚ್. ಈರಮ್ಮ, ಅಜ್ಜಂಪುರಶೆಟ್ರಾ ಶಂಭುಲಿಂಗಪ್ಪ, ಮುರುಘರಾಜೇಂದ್ರ ಜೆ. ಚಿಗಟೇರಿ, ಡಾ| ಶಾಂತಾ ಭಟ್, ಮಂಜುಳಾ ಬಸವಲಿಂಗಪ್ಪ, ಸ್ಮಾರ್ಟ್‌ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ಷರೀಫ್, ನಗರಪಾಲಿಕೆ ಆಯುಕ್ತ ಮಂಜುನಾಥ್ ಆರ್. ಬಳ್ಳಾರಿ, ಇಂಜಿನಿಯರ್ ಎಂ.ನಾಗರಾಜ್, ಹೈಡೆಕ್ ಸಂಸ್ಥೆಯವರು ಇದ್ದರು.