Advertisement

ಎಸ್‌ಐಟಿ ಅಧಿಕಾರಿಗಳ ಬದಲಾವಣೆ ಇಲ್ಲ: ಸಚಿವ

07:50 AM Oct 23, 2017 | Team Udayavani |

ಯಾದಗಿರಿ: “ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಕುರಿತಂತೆ ಎಸ್‌ಐಟಿ ಅಧಿಕಾರಿಗಳನ್ನು ವಾಪಸ್‌ ಕರೆಸಿಕೊಂಡಿಲ್ಲ. ಮಾಧ್ಯಮಗಳ ವರದಿ ಉಹಾಪೋಹದಿಂದ ಕೂಡಿದ್ದು, ಅಗತ್ಯ ಬಿದ್ದರೆ ಇನ್ನೂ ಹೆಚ್ಚಿನ ಅಧಿಕಾರಿಗಳ ನೇಮಕ ಮಾಡಲಾಗುವುದು’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

Advertisement

ನಗರದಲ್ಲಿ ನೂತನ ಜಿಲ್ಲಾ ಪೊಲೀಸ್‌ ಕಚೇರಿ ಉದ್ಘಾಟಿಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಈಗಾಗಲೇ ಆರೋಪಿಗಳ ಸುಳಿವು ದೊರೆತಿದೆ. ಅದನ್ನು ಮಾಧ್ಯಮ ಹಾಗೂ ಸಾರ್ವಜನಿಕರ ಮುಂದೆ ಹೇಳಲು ಸಾಧ್ಯವಿಲ್ಲ. ಆದಷ್ಟು ಬೇಗ ಆರೋಪಿಯನ್ನು ಬಂಧಿಸಲಾಗುವುದು. ಎಸ್‌ ಐಟಿ ಅಧಿಕಾರಿಗಳು ಸ್ಥಳೀಯರ ಮಾಹಿತಿ ಆಧರಿಸಿ ರೇಖಾಚಿತ್ರ ರಚಿಸಿದ್ದಾರೆ. ಬಲಪಂಥೀಯ, ಎಡಪಂಥೀಯರು ಎಂಬ ಬಗ್ಗೆ ಅವರು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next