Advertisement

ಸದ್ಯಕ್ಕೆ ಚುನಾವಣೆಯಲ್ಲಿ ಸ್ಪರ್ಧೆ ಇಲ್ಲ: ಮಾಯಾವತಿ

12:30 AM Mar 21, 2019 | |

ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟ ಜಯಗಳಿಸುವುದೇ ಆದ್ಯತೆ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಹೇಳಿದ್ದಾರೆ. 

Advertisement

ಲಕ್ನೋದಲ್ಲಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು, ಬೆಂಬಲಿಗರು ತಮ್ಮ ಈ ಘೋಷಣೆಯಿಂದ ನಿರಾಶೆ ಹೊಂದುವುದು ಬೇಡ. ಅಗತ್ಯ ಬಿದ್ದಲ್ಲಿ ನಂತರ ದಿನಗಳಲ್ಲಿಯೂ ಕೂಡ ಸಂಸತ್‌ ಪ್ರವೇಶಿಸಲು ಅವಕಾಶ ಇದೆ ಎಂದು ಹೇಳಿದ್ದಾರೆ. ಈ ಹೇಳಿಕೆ ಮೂಲಕ ಪರೋಕ್ಷವಾಗಿ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವುದನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ್ದಾರೆ ಮಾಯಾವತಿ. 

“ದೇಶದಲ್ಲಿರುವ ಪ್ರಸಕ್ತ ರಾಜಕೀಯ ಸ್ಥಿತಿ, ಪಕ್ಷದ ಹಿತದೃಷ್ಟಿಯಿಂದ ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ’ ಎಂದಿದ್ದಾರೆ. 

“ಅಗತ್ಯ ಬಿದ್ದರೆ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿ ಲೋಕಸಭೆ ಸದಸ್ಯೆಯಾಗಲು ಯಾವುದೇ ಸಮಸ್ಯೆ ಎದುರಾಗದು. ಸದ್ಯ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೆ, ಕಾರ್ಯಕರ್ತರು ಇತರ ಕ್ಷೇತ್ರಗಳಲ್ಲಿ ಪ್ರಚಾರದ ಬಗ್ಗೆ ಗಮನ ನೀಡುವುದಿಲ್ಲ’ ಎಂದಿದ್ದಾರೆ. ಉತ್ತರ ಪ್ರದೇಶದ ಪ್ರತಿಯೊಂದು ಕ್ಷೇತ್ರದಲ್ಲಿಯೂ ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟ ಗೆದ್ದರೆ ಅದು ತಮಗೆ ವೈಯಕ್ತಿಕ ಜಯಕ್ಕಿಂತ ಹೆಚ್ಚು ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next