Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಕ್ರಾಂತಿ ನಂತರ ರಾಜ್ಯದಲ್ಲಿ ಯಾವುದೇ ರಾಜಕೀಯ ಬದಲಾವಣೆ ಆಗುವುದಿಲ್ಲ. ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ ಎಂದು ಹೇಳಿದರು.
Related Articles
Advertisement
ಕೇಂದ್ರ ಸರ್ಕಾರ ಸಿಬಿಐ ನಿರ್ದೇಶಕರ ನೇಮಕ ವಿಚಾರದಲ್ಲಿ ನಡೆದುಕೊಂಡ ರೀತಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳೇ ಸರ್ಕಾರಕ್ಕೆ ನಿರ್ದೇಶನ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಕೇಂದ್ರದ ಲೋಪಗಳ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡುತ್ತ ಬಂದಿದೆ ಎಂದು ಹೇಳಿದರು.
ಚುನಾವಣೆಗಳಲ್ಲಿ ಸಾರ್ವಜನಿಕರನ್ನು ಹೆಚ್ಚು ಹೆಚ್ಚು ತಲುಪಲು ಸಾಮಾಜಿಕ ಜಾಲ ತಾಣ ಹೆಚ್ಚು ಪ್ರಭಾವಶಾಲಿಯಾಗಿದ್ದು, ಕೆಪಿಸಿಸಿ ಪ್ರಚಾರ ಸಮಿತಿ ಕೂಡ ಸಾಮಾಜಿಕ ಜಾಲ ತಾಣಗಳನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಂಡು ಹೆಚ್ಚಿನ ಮತದಾರರನ್ನು ತಲುಪುವ ಪ್ರಯತ್ನ ಮಾಡಲಿದೆ ಎಂದು ಹೇಳಿದರು.
ಸಿಎಂಗೆ ತೊಂದರೆ ಕೊಡುತ್ತಿಲ್ಲಮುಖ್ಯಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್‌ನವರ ಒತ್ತಡದಲ್ಲಿ ಸರಿಯಾಗಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ಹೇಳುವುದು ಸರಿಯಲ್ಲ. ಶಾಸಕರು ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಬಳಿ ಹೇಳಿಕೊಳ್ಳುತ್ತಾರೆ. ಮುಖ್ಯಮಂತ್ರಿ ಅದನ್ನು ಒತ್ತಡ ಎಂದುಕೊಳ್ಳಬಾರದು. ಸರ್ಕಾರ ನಡೆಸುವಾಗ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಬೇಡಿಕೆ ಇಡುವುದು ಸಾಮಾನ್ಯ . ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಯಾವುದೇ ರೀತಿಯ ತೊಂದರೆ ಕೊಡುತ್ತಿಲ್ಲ.
– ಎಚ್.ಕೆ.ಪಾಟೀಲ್