Advertisement

ಪಕ್ಷದಲ್ಲಿ ಗೊಂದಲವಿಲ್ಲ, 150 ಸ್ಥಾನ ಗೆಲ್ಲುವುದೊಂದೇ ಗುರಿ: ಬಿಎಸ್‌

12:46 PM May 06, 2017 | Team Udayavani |

ಮೈಸೂರು: ನಮ್ಮ ಮುಂದಿರುವ ಗುರಿಯೊಂದೆ 150 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Advertisement

ನಗರದ ರಾಜೇಂದ್ರ ಕಲಾಮಂದಿರದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಪೂರ್ವ ಸಿದ್ಧತೆ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಸಂಘಟನೆ, ಮುಂದೆ ಸಾಗಬೇಕಾದ ಗುರಿಗಳ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚಿಸಲಾಗುವುದು.

ಕಳೆದ ಬಾರಿ ನಡೆದ ಕಾರ್ಯಕಾರಿಣಿ ಸಭೆಯ ತೀರ್ಮಾನದಂತೆ ಮೈಸೂರು ನಗರದಲ್ಲಿ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದೆ. ಹಿಂದಿನ ಕಾರ್ಯಕಾರಿಣಿಗಿಂತಲೂ ಈ ಬಾರಿ ಅತ್ಯಂತ ಯಶಸ್ವಿಯಾಗಿ ಸಭೆ ನಡೆಯಲಿದೆ ಎಂದು ಅವರು ವಿಶ್ವಾಸವ್ಯಕ್ತಪಡಿಸಿದರು.

ರಾಜ್ಯದ ಸಂಸದರು, ಶಾಸಕರು, ರಾಜ್ಯಘಟಕದ ಪದಾಧಿಕಾರಿಗಳು, ವಿರೋಧ ಪಕ್ಷದ ಇಬ್ಬರೂ ನಾಯಕರು ಸೇರಿದಂತೆ ಕಾರ್ಯಕಾರಿಣಿ ಸದಸ್ಯರೆಲ್ಲÉರಿಗೂ ಆಹ್ವಾನ ನೀಡಲಾಗಿದೆ. ಈ ಬಾರಿ ಹಲವರನ್ನು ವಿಶೇಷ ಆಹ್ವಾನಿತರನ್ನಾಗಿ ಸೇರಿಸಿರುವುದರಿಂದ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರೂ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವೈಫ‌ಲ್ಯ ಕಂಡಿದೆ. ಈ ಸರ್ಕಾರದ ದುರಾಡಳಿತ, ವೈಫ‌ಲ್ಯಗಳ ಬಗ್ಗೆ ಚರ್ಚಿಸಿ ಮುಂದಿನ ಹೋರಾಟದ ರೂಪುರೇಷೆಗಳ ಸಿದ್ಧಪಡಿಸಲಾಗುವುದು. ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೂರು ವರ್ಷದ ಆಡಳಿತದಲ್ಲಿ ಜಾರಿಗೆ ತಂದಿರುವ ಹಲವು ಜನಪರ ಕಾರ್ಯಕ್ರಮಗಳನ್ನು ಜನ ಸಾಮಾನ್ಯರಿಗೆ ತಲುಪಿಸಬೇಕಾಗಿದೆ.

Advertisement

ಅದಕ್ಕಾಗಿ ಯಾವ್ಯಾವ ರೀತಿಯಲ್ಲಿ ಯೋಜನೆ ರೂಪಿಸಬೇಕು ಎನ್ನುವುದರ ಕುರಿತು ಚರ್ಚೆ ನಡೆಯಲಿದೆ ಎಂದರು. ರಾಜ್ಯ ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ. ರಾಷ್ಟ್ರೀಯ ನಾಯಕರು ಕೊಟ್ಟಸೂಚನೆಯಂತೆ ಪಕ್ಷದ ಕೆಲಸ ಮಾಡುತ್ತೇವೆ. ಕಾರ್ಯಕಾರಿಣಿ ಯಶಸ್ವಿಯಾಗಿ ನಡೆದು ಉತ್ತಮ ನಿರ್ಣಯ ಕೈಗೊಂಡು ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ಈ ವೇಳೆ ಸಂಸದ ಪ್ರತಾಪ್‌ ಸಿಂಹ, ಜಿಲ್ಲಾಧ್ಯಕ್ಷ ಕೋಟೆ ಎಂ.ಶಿವಣ್ಣ, ನಗರಾಧ್ಯಕ್ಷ ಡಾ.ಬಿ.ಎಚ್‌.ಮಂಜುನಾಥ್‌, ವಿಭಾಗ ಪ್ರಭಾರಿ ಎಲ್‌.ನಾಗೇಂದ್ರ ಇನ್ನಿತರರು ಹಾಜರಿದ್ದರು.

ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲದ ನಿರ್ವಹಣೆಯಲ್ಲಿ ವಿಫ‌ಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿನಿಮಾ ನೋಡುವುದು, ಹೋಟೆಲ್‌ಗ‌ಳಿಗೆ ಹೋಗಿ ಮಸಾಲೆ ದೋಸೆ ತಿನ್ನುವುದನ್ನೇ ಸಾಧನೆ ಎನ್ನುವಂತೆ ಬಿಂಬಿಸಿಕೊಳ್ಳುತ್ತಿದ್ದಾರೆ.
-ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next