Advertisement

ಮುಳಬಾಗಿಲಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯೇ ಇಲ್ಲ

07:35 AM Apr 27, 2018 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ದಿನ ಬರುವ ಮುನ್ನವೇ ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರದಲ್ಲಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನೇ ಕಳೆದುಕೊಂಡಿದೆ. ನಕಲಿ ಜಾತಿ ಪ್ರಮಾಣ ಪತ್ರ ಕೊಟ್ಟ ಆರೋಪದ ಚುನಾವಣಾ ಆಯೋಗ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೊತ್ತೂರು ಮಂಜುನಾಥ್‌ ಅವರ ನಾಮಪತ್ರ ತಿರಸ್ಕರಿಸಿದೆ. 

Advertisement

ಹೀಗಾಗಿ ಈ ಕ್ಷೇತ್ರದಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಅಭ್ಯರ್ಥಿಗಳಿಲ್ಲ. ಆದರೆ ಕೆ.ಎಚ್‌.ಮುನಿಯಪ್ಪ ಅವರ ಪುತ್ರಿ ನಂದಿನಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್‌ ಅವರ ಆಪ್ತ ನಾಗೇಶ್‌ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದು, ಇವರಿಬ್ಬರಲ್ಲಿ ಒಬ್ಬರನ್ನು ಕಾಂಗ್ರೆಸ್‌ ಬೆಂಬಲಿಸುವ ಸಾಧ್ಯತೆ ಇದೆ.

ಇನ್ನು ನಾಮಪತ್ರ ವಾಪಸ್‌ಗೆ ಶುಕ್ರವಾರ ಕಡೇ ದಿನವಾಗಿದ್ದು, ಬಂಡಾಯ ಶಮನಕ್ಕೆ ಎಲ್ಲ ಪಕ್ಷಗಳು ಸರ್ಕಸ್‌ ಮಾಡುತ್ತಿವೆ. ಕಾಂಗ್ರೆಸ್‌ ಮತ್ತು ಬಿಜೆಪಿಯಲ್ಲಿ 20ಕ್ಕೂ ಹೆಚ್ಚು ಬಂಡಾಯ ಅಭ್ಯರ್ಥಿಗಳು ಕಾಣಿಸಿಕೊಳ್ಳುವ ಆತಂಕ ಎದುರಾಗಿದೆ. ಜೆಡಿಎಸ್‌ನಲ್ಲೂ ಮೂರ್ನಾಲ್ಕು ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಗಳ ಭೀತಿ ಇದೆ.

Advertisement

Udayavani is now on Telegram. Click here to join our channel and stay updated with the latest news.

Next