Advertisement

ಒಡೆದು ಆಳುತ್ತಿರುವ ಬಿಜೆಪಿಗೂ ಬ್ರಿಟೀಷರಿಗೂ ಯಾವುದೇ ವ್ಯತ್ಯಾಸವಿಲ್ಲ: ಕುಮಾರಸ್ವಾಮಿ

12:36 PM Apr 09, 2022 | Team Udayavani |

ಬೆಂಗಳೂರು: ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು ಕಳೆದ 75 ವರ್ಷಗಳಿಂದ ಒಂದೇ ತಾಯಿಯ ಮಕ್ಕಳಂತೆ ಇರುವ ರಾಜ್ಯಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಳಿ ಹಿಂಡಿ, ಹಿಂದಿ ಹೇರಿಕೆ ಬಗ್ಗೆ ಹೇಳಿಕೆ ನೀಡುತ್ತಿರುವುದು ಆಘಾತಕಾರಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಅಮಿತ್ ಶಾ ಹೇಳಿಕೆ ವಿರೋಧಿಸಿ ಸರಣಿ ಟ್ವೀಟ್ ಮಾಡಿರುವ ಎಚ್ ಡಿಕೆ, ಪ್ರತಿಯೊಂದಕ್ಕೂ ಹಿಂದುತ್ವದ ಜಪ ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ಸಮಾಜ ಮತ್ತು ಜನರನ್ನು ಒಡೆಯುತ್ತಿರುವ ಬಿಜೆಪಿ, ಈಗ ಭಾಷೆಯನ್ನೂ ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಬ್ರಿಟಿಷರು ಪ್ರತಿ ಸಂಸ್ಥಾನವನ್ನು ಆಕ್ರಮಿಸಿಕೊಳ್ಳುವ ಮುನ್ನ ಒಡೆದು ಆಳುವ ನೀತಿ ಅನುಸರಿಸುತ್ತಿದ್ದರು. ಈಗ ಬಿಜೆಪಿ ಅದೇ ನೀತಿ ಮುಂದುವರೆಸಿದ್ದು, ಬ್ರಿಟೀಷರಿಗೂ ಮತ್ತು ಬಿಜೆಪಿಗೆ ಯಾವುದೇ ವ್ಯತ್ಯಾಸ ಇಲ್ಲ ಎನ್ನುವುದಕ್ಕೆ ಇದೇ ಜೀವಂತ ಸಾಕ್ಷಿ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ:ನೆಲಮಂಗಲ : ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಒಕ್ಕಲಿಗ ಮುಖಂಡರ ಅಸಮಾಧಾನ

ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ?  ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ ಎಂದು ಎಚ್ ಡಿಕೆ ಟ್ವೀಟ್ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next