Advertisement

ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಅಸಮಾಧಾನವಿಲ್ಲ: ಎಚ್ಕೆ

07:00 AM Jun 12, 2018 | Team Udayavani |

ಗದಗ: ಸಚಿವ ಸ್ಥಾನ ಕೈ ತಪ್ಪಿರುವ ಬಗ್ಗೆ ಯಾವುದೇ ರೀತಿ ಅಸಮಾಧಾನವಿಲ್ಲ, ಒತ್ತಡ ಹೇರಿ ಸಚಿವ ಸ್ಥಾನಪಡೆಯುವ
ಜಾಯಮಾನ ನನ್ನದಲ್ಲ ಎಂದು ಮಾಜಿ ಸಚಿವ, ಶಾಸಕ ಎಚ್‌.ಕೆ.ಪಾಟೀಲ ಹೇಳಿದರು. 

Advertisement

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ಯಾರಿಗೆ ನೀಡಬೇಕೆಂಬುದು ಪಕ್ಷದ ವರಿಷ್ಠರ ವಿವೇಚನೆಗೆ ಬಿಟ್ಟ ವಿಚಾರ ಎಂದರು.

ಎರಡನೇ ಪಟ್ಟಿ ಬಗ್ಗೆಯೂ ನಿರೀಕ್ಷೆಯಿಲ್ಲ. ಸಚಿವ ಸ್ಥಾನ ಯಾರಿಗೆ ನೀಡಬೇಕು ಎಂಬುದನ್ನು ಪಕ್ಷದ ವರಿಷ್ಠರೇ ತೀರ್ಮಾನಿಸುತ್ತಾರೆ. ನನಗೆ ಸಚಿವ ಸ್ಥಾನ ಕೈ ತಪ್ಪಲು ಕಾರಣವೇನೆಂಬುದು ಗೊತ್ತಿಲ್ಲ ಎಂದರು.

ನನಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಪಕ್ಷದ ಪದಾ ಧಿಕಾರಿಗಳು,ಕಾರ್ಯಕರ್ತರು, ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಅವರಿಗೆ ಆಭಾರಿಯಾಗಿದ್ದೇನೆ ಎಂದರಲ್ಲದೇ, ಪ್ರತಿಭಟನೆ ಹಾಗೂ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುವ ಮೂಲಕ ಪಕ್ಷದ ಮೇಲೆ ಒತ್ತಡ ಹಾಕಿರುವ ಪ್ರವೃತ್ತಿ ಸರಿಯಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next