Advertisement

ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ: ಅಶೋಕ್

03:01 PM Aug 10, 2021 | Team Udayavani |

ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ವಾಜಪೇಯಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಇದು ಬಿಜೆಪಿ ಸರ್ಕಾರ ಯಾವುದೇ ಸರ್ಕಾರ ಬಂದರೂ ವ್ಯಕ್ತಿಯ ಹೆಸರಿಡುವ ಪದ್ಧತಿಯನ್ನು ಬಿಟ್ಟು ಮುಖ್ಯಮಂತ್ರಿ ಅಥವಾ ಪ್ರಧಾನ ಮಂತ್ರಿ ಯೋಜನೆ ಅಂತ ಹೆಸರಿಟ್ಟರೆ ಯಾವುದೇ ಸರ್ಕಾರ ಸಿಎಂ ಬಂದರೂ ಅದು ಮುಂದುವರೆಯುತ್ತದೆ ಎಂದರು.

ಹಿಂದುಗಳಿಗೆ ಶ್ರಾವಣ ಶನಿವಾರ ಮಹತ್ವದ ದಿನ. ಸಾಲು ಸಾಲು ಹಬ್ಬಗಳು ಬರುತ್ತಿವೆ. ಅಮೆರಿಕಾದಲ್ಲಿ ಕೊವಿಡ್ 3 ನೇ ಅಲೆಯಿಂದ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅನೇಕ ಕಟ್ಟು ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಕ್ಕಳ ಆಸ್ಪತ್ರೆ ತೆರೆಯಲು ಸೂಚನೆ ನೀಡಿದ್ದೇನೆ. ಐದಾರು ದಿನಗಳಲ್ಲಿ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೋಡುತ್ತೇನೆ.  ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗಿದೆ. ಅದು ರಾಜ್ಯದಲ್ಲಿ ಕಾಣಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ:ಈಶ್ವರಪ್ಪನಿಗೆ ಸಂಸ್ಕಾರ, ಸಂಸ್ಕೃತಿ ಏನೆಂಬುದು ಗೊತ್ತಿಲ್ಲ : ಸಿದ್ದರಾಮಯ್ಯ ಕಿಡಿ

ಸಿಎಂ ನಾಳೆ ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳಿಗೆ ತಾತ್ಕಾಲಿಕವಾಗಿ ಬೆಡ್ ಗಳನ್ನು ವಾಪಸ್ ನೀಡಲಾಗಿದೆ. ಅಗತ್ಯ ಬಿದ್ದರೆ ಬೆಡ್ ಗಳನ್ನು ವಾಪಸ್ ಪಡೆಯುತ್ತೇವೆ. ನಮ್ಮ ಆದೇಶದಲ್ಲಿಯೇ ಅದನ್ನು ತಿಳಿಸಿದ್ದೇವೆ ಎಂದು ಅಶೋಕ್ ಹೇಳಿದರು.

Advertisement

ಸಚಿವರುಗಳು ಕೂಡ ಕೋವಿಡ್ ನಿಯಮ ಪಾಲಿಸಬೇಕು. ಕೋವಿಡ್ ಎಲ್ಲರಿಗೂ ಒಂದೇ. ಯಾರೂ ನಿಯಮ ಮೀರಬಾರದು ಎಂದ ಅವರು ಸ್ವಾಂತಂತ್ರ್ಯ ದಿನಾಚರಣೆಯನ್ನು ಕೋವಿಡ್ ನಿಯಮದಂತೆ ಆಚರಿಸಲು ತೀರ್ಮಾನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next