Advertisement

ಜಿಲ್ಲೆಯಲ್ಲಿ ಪ್ರವಾಹದ ಆತಂಕವಿಲ್ಲ: ರಮೇಶ

01:14 PM Oct 17, 2020 | Suhan S |

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಪ್ರವಾಹದ ಆತಂಕವಿಲ್ಲ. ಆದರೂ ಮಳೆಯ ಪ್ರಮಾಣ ಹೆಚ್ಚಾದರೆ ಅದನ್ನು ಗಮನದಲ್ಲಿರಿಸಿಕೊಂಡು ಆಲಮಟ್ಟಿ ಜಲಾಶಯದಿಂದಇನ್ನಷ್ಟು ನೀರು ಬಿಡುಗಡೆ ಮಾಡಲು ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಅತಿವೃಷ್ಟಿ ಹಾಗೂ ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದಅವರು, ಕೃಷ್ಣಾ ನದಿಯಲ್ಲಿ ನೀರಿನ ಹರಿವು 2.30 ಲಕ್ಷ ಕ್ಯೂಸೆಕ್‌ಗಿಂತ ಅಧಿಕಗೊಂಡಾಗಮಾತ್ರ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಈಗ ಮಳೆ ಕಡಿಮೆಯಾಗಿರುವುದರಿಂದ ಯಾವುದೇ ತೊಂದರೆಯಿಲ್ಲ ಎಂದರು.

ಪ್ರವಾಹದಿಂದ ಮನೆಗಳ ಹಾನಿಗೆ ಸಂಬಂಧಿಸಿದಂತೆ ಈಗಾಗಲೇ ಸಮೀಕ್ಷೆ ಪೂರ್ಣಗೊಂಡಿರುವ ಕಡೆಗಳಲ್ಲಿತಕ್ಷಣವೇ ಪರಿಹಾರ ಹಣ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು, ಮಳೆಯ ಪ್ರಮಾಣ ಕಡಿಮೆಯಾಗಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಮನೆ ಹಾಗೂ ಬೆಳೆಹಾನಿಯ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಬೆಳೆಹಾನಿಗೆ ಸಂಬಂಧಿಸಿದಂತೆ ಜಿಲ್ಲೆಯ ರೈತರಿಗೆ ಪರಿಹಾರ ಬಿಡುಗಡೆಗೆ ಸರ್ಕಾರ ಅನುಮೋದನೆ ನೀಡಿದೆ. ಆದಷ್ಟು ಬೇಗನೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದರು.

ಜಿಲ್ಲೆಯಲ್ಲಿ ಕೆಳಹಂತದಲ್ಲಿ ಇರುವಏಳು ಸೇತುವೆಗಳು ಮಾತ್ರ ಮಳೆಗಾಲದಲ್ಲಿ ಮುಳುಗಡೆಯಾಗುತ್ತವೆ. ಆದರೆ ಎಲ್ಲ ಕಡೆಯೂ ಪರ್ಯಾಯ ಮಾರ್ಗಗಳು ಇರುವುದರಿಂದ ಜನಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಈಗಾಗಲೇ ಆಲಮಟ್ಟಿ ಜಲಾಶಯದಿಂದಒಳಹರಿವು ಆಧರಿಸಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಶನಿವಾರದವರೆಗೆ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ ಎಂದು ನೀರಾವರಿ ಇಲಾಖೆಯ ಅಭಿಯಂತರ ಸಿ.ಡಿ.ಪಾಟೀಲ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಮಳೆ-ಗಾಳಿಯಿಂದ ಸ್ವಲ್ಪಮಟ್ಟಿಗೆ ಕಬ್ಬು ಬೆಳೆ, ಮೆಕ್ಕೆಜೋಳ, ಹತ್ತಿ ಬೆಳೆ ಹಾನಿಯಾಗಿದೆ. ಇದಲ್ಲದೆ ಜಿಲ್ಲೆಯಲ್ಲಿ ಹತ್ತಿ ಬೆಳೆಗೆ ರೋಗ ತಗುಲಿರುವುದನ್ನು ಪರಿಶೀಲಿಸಲು ವಿಜ್ಞಾನಿಗಳ ತಂಡ ಕಳಿಸಲಾಗುತ್ತಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಹೇಳಿದರು.ಬೆಳಗಾವಿ ನಗರ ಪೊಲೀಸ್‌ ಆಯುಕ್ತ ತ್ಯಾಗರಾಜನ್‌, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್‌ ಎಚ್‌.ವಿ., ಜಿಲ್ಲಾ ಪೊಲಿಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ನೀರಾವರಿ ನಿಗಮದ ಬೆಳಗಾವಿ ಉತ್ತರ ವಲಯದಮುಖ್ಯ ಎಂಜಿನಿಯರ್‌ ಅರವಿಂದ ಕಣಗಲಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪಾಲಿಕೆಯ ಆಯುಕ್ತ ಜಗದೀಶ್‌ ಕೆ.ಎಚ್‌., ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌ .ವಿ.ಮುನ್ಯಾಳ ಸಭೆಯಲ್ಲಿ ಉಪಸ್ಥಿತರಿದ್ದರು.

Advertisement

ಕೋವಿಡ್‌-19; ನಿಯಂತ್ರಣ ನಿರ್ಲಕ್ಷ್ಯ ಮಾಡುವಂತಿಲ್ಲ  :  ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಆಕ್ಸಿಜನ್‌ ಮತ್ತು ವೆಂಟಿಲೇಟರ್‌ ಸೌಲಭ್ಯಗಳ ಲಭ್ಯತೆಯ ಮಾಹಿತಿ ಪಡೆದುಕೊಂಡ ಸಚಿವ ರಮೇಶ ಜಾರಕಿಹೊಳಿ, ಜಿಲ್ಲಾ ಕೇಂದ್ರಸೇರಿದಂತೆ ಎಲ್ಲ ತಾಲೂಕು ಸ್ಥಳಗಳಲ್ಲೂ ಅಗತ್ಯ ವೈದ್ಯಕೀಯ ಸೌಲಭ್ಯ ಲಭಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಕಳೆದ ಎರಡು ಮೂರು ತಿಂಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣದಲ್ಲಿ ಇಳಿಮುಖವಾಗಿದೆ. ಆದರೆ ಅಧಿಕಾರಿಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಆಕ್ಸಿಜನ್‌ ಮತ್ತು ವೆಂಟಿಲೇಟರ್‌ ಸೌಲಭ್ಯ ಹೊಂದಿರುವ ಬೆಡ್‌ಗಳು ಸೇರಿದಂತೆ ಯಾವುದೇ ರೀತಿಯ ಕೊರತೆಯಿಲ್ಲ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ತುಕ್ಕಾರ ಹೇಳಿದರು. ಜಿಲ್ಲೆಯಲ್ಲಿ ಈಗ ಪ್ರತಿದಿನ ಸಾವಿರಕ್ಕಿಂತ ಅಧಿಕ ಪರೀಕ್ಷೆ ಮಾಡಲಾಗುತ್ತಿದ್ದು, ಸೋಂಕಿನಪ್ರಮಾಣದಲ್ಲಿ ಇಳಿಮುಖವಾಗಿದೆ ಎಂದು ಬಿಮ್ಸ್‌ ನಿರ್ದೇಶಕ ಡಾ.ದಾಸ್ತಿಕೊಪ್ಪ ತಿಳಿಸಿದರು

Advertisement

Udayavani is now on Telegram. Click here to join our channel and stay updated with the latest news.

Next