ಮೈಸೂರು: ಶಾಲಾಕಾಲೇಜುಗಳ ಆರಂಭದ ವಿಚಾರದಲ್ಲಿ ಸರ್ಕಾರ ಆತುರತೆ ತೋರುವುದಿಲ್ಲ ನನಗೆ ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತ ಮುಖ್ಯವಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ರಾಜ್ಯದಲ್ಲಿ ಶಾಲಾ ಕಾಲೇಜುಗಳ ಆರಂಭಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿ ಶ್ರೀರಾಮುಲು, ಶಾಲಾಕಾಲೇಜುಗಳ ಆರಂಭದ ವಿಚಾರದಲ್ಲಿ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ. ಈ ಸಂಬಂಧ ಒಂದು ವಾರದೊಳಗೆ ವರದಿ ನೀಡುವಂತೆ ತಜ್ಞರ ಸಮಿತಿಗೆ ಸೂಚಿಸಲಾಗಿದೆ. ತಜ್ಞರ ಸಮಿತಿ ನೀಡುವ ವರದಿ ಅಧರಿಸಿ ಶಾಲಾ ಕಾಲೇಜುಗಳ ಆರಂಭದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಸಂಬಂಧ ದೇಶದ 16 ರಾಜ್ಯಗಳು ಹೆಚ್ಚಿನ ನಿಗಾ ವಹಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೂಚಿಸಿದ್ದಾರೆ. ಕರ್ನಾಟಕದಲ್ಲಿ ಬೆಂಗಳೂರು ಮತ್ತು ಮೈಸೂರಿನಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಪ್ರಧಾನಿಗಳು ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಜನಪ್ರತಿನಿಧಿಯಾಗಿ, ಉನ್ನತ ಹುದ್ದೆ ಅಲಂಕರಿಸಿ 20 ವರ್ಷ ಪೂರೈಸಿದ ಪ್ರಧಾನಿ ನರೇಂದ್ರ ಮೋದಿ
ಹಾಗಾಗಿ ಇಂದು ಮೈಸೂರು ಭಾಗದ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ದಸರಾ ಮಹೋತ್ಸವವನ್ನು ಮತ್ತಷ್ಟು ಸರಳವಾಗಿ, ಸುರಕ್ಷಿತವಾಗಿ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.