Advertisement

ಪರಿಕರಗಳ ಖರೀದಿಯಲ್ಲಿ ಅವ್ಯವಹಾರ ಆಗಿಲ್ಲ

07:11 AM Jul 04, 2020 | Lakshmi GovindaRaj |

ಬೆಂಗಳೂರು: ಕೋವಿಡ್‌ 19 ನಿಯಂತ್ರಣಕ್ಕಾಗಿ ಅಗತ್ಯವಾದ ಉಪಕರಣ ಹಾಗೂ ಔಷಧ ಖರೀದಿಯಲ್ಲಿ ಯಾವುದೇ ರೀತಿಯ ಅವ್ಯವಹಾರ, ಭ್ರಷ್ಟಾಚಾರ ಆಗಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿ, ಸರ್ಕಾರ ಹಗಲು, ರಾತ್ರಿ ಕೋವಿಡ್‌ 19 ನಿಯಂತ್ರಣಕ್ಕೆ ಕೆಲಸ ಮಾಡುತ್ತಿರು ವಾಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಇಂತಹ ಹೇಳಿಕೆ ನೀಡಿರುವುದು ನೋವಿನ ಸಂಗತಿ. ಇದರಿಂದ ರಾಜ್ಯಕ್ಕೆ ಒಳ್ಳೆಯ ಸಂದೇಶ ಹೋಗುವುದಿಲ್ಲ ಎಂದರು.

Advertisement

ಎಲ್ಲದಕ್ಕೂ ದಾಖಲೆಗಳಿವೆ, ನಾವ್ಯಾರೂ ಓಡಿ ಹೋಗಲ್ಲ. ಕೋವಿಡ್‌ ಪರಿಕರ, ಔಷಧ ಖರೀದಿಯಲ್ಲಿ ಯಾರಾ ದರೂ ಹಣ ಮಾಡಿದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇರಲು ಅರ್ಹರಲ್ಲ. ನಾವು  ಯಾವುದನ್ನೂ ಬಚ್ಚಿಟ್ಟುಕೊಂಡಿಲ್ಲ, ಈ ಸರ್ಕಾರಕ್ಕೆ ಬಚ್ಚಿಟ್ಟುಕೊಳ್ಳುವ ಪ್ರಮೇಯವೇ ಇಲ್ಲ ಎಂದು ತಿಳಿಸಿದರು. ಸಿದ್ದರಾಮಯ್ಯ ಅವರಿಂದ ಇಂತಹ ಆರೋಪ ನಿರೀಕ್ಷೆ ಮಾಡಿರಲಿಲ್ಲ.  ವೈದ್ಯಕೀಯ ಇಲಾಖೆ, ಆರೋಗ್ಯ ಇಲಾಖೆ ಅಥವಾ ಸರ್ಕಾರದಿಂದ ಏನೇ ಖರೀದಿಸಿದರೂ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳ ತಂಡ ಪಾರದರ್ಶಕ ವಾಗಿ ಕ್ರಮ ಕೈಗೊಳ್ಳಲಿದೆ. ಯಾವುದೇ ರೀತಿಯ ತನಿಖೆಗೂ  ನಾವು ಸಿದ್ಧರಿದ್ದೇವೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next