Advertisement

ಎಲೆಕ್ಷನ್‌ ಬಳಿಕ ಲಿಂಗಾಯತ ಮಹಾಸಭಾ ಇರಲ್ಲ

06:55 AM Jan 27, 2018 | Team Udayavani |

ದಾವಣಗೆರೆ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಜಾಗತಿಕ ಲಿಂಗಾಯತ ಮಹಾಸಭಾ ರಾಜ್ಯ ವಿಧಾನಸಭಾ ಚುನಾವಣೆ ನಂತರ ತಾನೇ ತಾನಾಗಿ ಮುಚ್ಚಿ ಹೋಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಭವಿಷ್ಯ ನುಡಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಹೇಳಿದಂತೆ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಚುನಾವಣೆವರೆಗೆ ಇರುತ್ತದೆ. ಅದೇ ರೀತಿ ಜಾಗತಿಕ ಲಿಂಗಾಯತ ಮಹಾಸಭಾ ಸಹ ಚುನಾವಣೆವರೆಗೆ ಮಾತ್ರ ಇರುತ್ತದೆ ಎಂದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಯನ್ನೇ ಗುರುತಿಸಿ ಪಕ್ಷದ ಟಿಕೆಟ್‌ ನೀಡಲಾಗುವುದು.

ಹಾಗಾಗಿ ಈಗಾಗಲೇ ಎಲ್ಲ ಕ್ಷೇತ್ರದಲ್ಲಿ ಪಕ್ಷದ ಆಂತರಿಕ ಸರ್ವೇ ಕಾರ್ಯ ನಡೆಯುತ್ತಿದೆ. ಅಭ್ಯರ್ಥಿ ಯಾರೇ ಆಗಲಿ ಗೆಲ್ಲಬೇಕು ಎಂಬುದೇ ನಮ್ಮ ಉದ್ದೇಶ. ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್‌ ಖಚಿತ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಾವೇ ಮಾಡುತ್ತೇವೆ: ದಾವಣಗೆರೆಯಲ್ಲಿ ನಡೆಯಬೇಕಿದ್ದ ವಿಶ್ವ ಕನ್ನಡ ಸಮ್ಮೇಳನ ಬರ, ಅತಿವೃಷ್ಟಿ, ಚುನಾವಣೆ ಮತ್ತಿತರ ಕಾರಣದಿಂದ ನಡೆಯಲಿಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ನಾವೇ ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next