Advertisement

ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚು ಬಹಿರಂಗ ಸಭೆ ಇಲ್ಲ –ಡಿ.ಕೆ.ಶಿವಕುಮಾರ್‌

08:53 PM Mar 20, 2021 | Team Udayavani |

ಬೆಂಗಳೂರು: ಉಪ ಚುನಾವಣೆಯಲ್ಲಿ ಕೋವಿಡ್ ಹಿನ್ನೆಲೆ ಹೆಚ್ಚು ಬಹಿರಂಗ ಸಭೆಗಳನ್ನು ಮಾಡದೇ ಎರಡೆರಡು ಕಾರ್ಯಕ್ರಮಗಳನ್ನು ಮಾತ್ರ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಹಿರಿಯ ನಾಯಕರ ಸಭೆಯ ನಂತರ ಮಾತನಾಡಿದ ಅವರು, ಕೋವಿಡ್ ಮಾರ್ಗಸೂಚಿ ಇನ್ನೂ ಗೊಂದಲದಲ್ಲಿದೆ. 500 ಜನ ಎಂದು ಹೇಳಿದ್ದರು. ನಾವು ಕೂಡ ನಿನ್ನೆ, ಇವತ್ತು ಹಾಗೂ ನಾಳೆ ನಿಗದಿಯಾಗಿದ್ದ ಸಭೆಯನ್ನು ರದ್ದು ಮಾಡಿದೆವು. ಸರ್ಕಾರವಂತೂ ಈ ಚುನಾವಣೆ ಹಾಗೂ ಮಾರ್ಗಸೂಚಿ ವಿಚಾರದಲ್ಲಿ ಗೊಂದಲದಲ್ಲಿದೆ ಎಂದು ತಿಳಿಸಿದರು.

ಉಪ ಚುನಾವಣೆಯಲ್ಲಿ ರಾಜ್ಯದ ಹಿರಿಯ ನಾಯಕರು ಜವಾಬ್ದಾರಿ ತೆಗೆದುಕೊಳ್ಳಬೇಕೆಂದು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ಬಂಟ್ವಾಳ : ಜ್ಯೋತಿಷಿಯೋರ್ವರಿಗೆ ಚೂರಿ ಇರಿದು ಪರಾರಿಯಾದ ಅಪರಿಚಿತರು

ಈ ಉಪಚುನಾವಣೆಗೆ ಎಲ್ಲರೂ ಉತ್ಸಾಹದಲ್ಲಿದ್ದು, ಮೂರೂ ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸವಿದೆ. ಮತದಾರರ ಮೇಲೆ ಅಪಾರ ನಂಬಿಕೆ ಇಟ್ಟಿದ್ದೇವೆ. ಈ ರಾಜ್ಯದಲ್ಲಿ ಬದಲಾವಣೆ ಅಗತ್ಯವಿದೆ ಎಂದು ಮತದಾರ ತೀರ್ಮಾನಿಸಿದ್ದು, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಮನವಿ ಮಾಡಿ ಅಭ್ಯರ್ಥಿ ಗೆಲ್ಲಿಸಲು ನಾವೆಲ್ಲ ಪ್ರಯತ್ನ ಮಾಡುತ್ತೇವೆ ಎಂದರು.

Advertisement

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್‌ ವಿಪಕ್ಷ ನಾಯಕ ಎಸ್‌.ಆರ್‌.ಪಾಟೀಲ್‌, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್‌, ಈಶ್ವರ್‌ ಖಂಡ್ರೆ, ಧ್ರುವನಾರಾಯಣ, ದಿನೇಶ್‌ಗುಂಡೂರಾವ್‌, ಎಚ್‌.ಕೆ.ಪಾಟೀಲ್‌, ಆರ್‌.ವಿ.ದೇಶಪಾಂಡೆ, ಎಂ.ಬಿ.ಪಾಟೀಲ್‌, ಎಐಸಿಸಿ ವೀಕ್ಷಕ ಮಧು ಯಕ್ಷಿಗೌಡ ಸೇರಿ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next