Advertisement

High Court: ಭೂ ಸ್ವಾಧೀನ ಪರಿಹಾರಕ್ಕೆ ತೆರಿಗೆ ವಿಧಿಸಿದ್ದಕ್ಕೆ ಆಕ್ಷೇಪ ಬಲವಂತದ ಕ್ರಮ ಬೇಡ

09:43 PM Dec 16, 2024 | Team Udayavani |

ಬೆಂಗಳೂರು: ಭೂ ಸ್ವಾಧೀನ ಪರಿಹಾರಕ್ಕೆ ಆದಾಯ ತೆರಿಗೆ ವಿಧಿಸಿದ ಕ್ರಮವನ್ನು ಪ್ರಶ್ನಿಸಿ ಮಂಗಳೂರಿನ ಉದ್ಯಮಿಯೊಬ್ಬರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು’ ಎಂದು ಹೈಕೋರ್ಟ್‌, ಆದಾಯ ತೆರಿಗೆ ಅಧಿಕಾರಿಗಳಿಗೆ ನಿರ್ದೇಶಿಸಿದೆ.ಈ ಸಂಬಂಧ ಮಂಗಳೂರಿನ ಉದ್ಯಮಿ ಸುಪ್ರಿಯಾ ಎಸ….ಶೆಟ್ಟಿ ಸಲ್ಲಿಸಿರುವ ರಿಟ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

Advertisement

ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ಮಧ್ಯಂತರ ಆದೇಶ ನೀಡಿರುವ ನ್ಯಾಯಪೀಠ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಸೇರಿದಂತೆಪ್ರಕರಣದಲ್ಲಿನ ಒಟ್ಟು ಎಂಟು ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿದ್ದು, ವಿಚಾರಣೆಯನ್ನು 2025ರ ಜನವರಿ 22ಕ್ಕೆ ಮುಂದೂಡಿದೆ.

ಪ್ರಕರಣವೇನು?: ಅರ್ಜಿದಾರರಿಗೆ ಸೇರಿದ 17.48 ಎಕರೆ ಜಮೀನಿನ ಕೆಲ ಭಾಗವನ್ನು ರಾಷ್ಟ್ರೀಯ ಹೆದ್ದಾರಿ-169ರ ವಿಸ್ತರಣೆಗಾಗಿ 2020ರಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಈ ಸಂಬಂಧ ನೀಡಲಾದ ಪರಿಹಾರ ಧನದ ಮೊತ್ತ 1.9 ಕೋಟಿಯಲ್ಲಿ ತೆರಿಗೆ ಅಧಿಕಾರಿಗಳು ಮೂಲದಲ್ಲೇ ತೆರಿಗೆ ಕಡಿತ ಮಾಡಿಕೊಂಡಿದ್ದಾರೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಕಾಯ್ದೆ-1956ರ ಪ್ರಕಾರ ನಮಗೆ, ನ್ಯಾಯಸಮ್ಮತ ಪರಿಹಾರ ನೀಡಿಕೆ ಹಕ್ಕು ಮತ್ತು ಭೂ ಸ್ವಾಧೀನದಲ್ಲಿ ಪಾರದರ್ಶಕತೆ, ಪುನರ್ವಸತಿ ಹಾಗೂ ಪುನರ್‌ ನಿರ್ಮಾಣ ಕಾಯ್ದೆ-2013 ಅನ್ವಯಿಸುತ್ತದೆ. ಹಾಗಾಗಿ, ಪರಿಹಾರ ಧನಕ್ಕೆ ತೆರಿಗೆ ವಿನಾಯಿತಿ ಘೋಷಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಕೆ.ವಿ.ಧನಂಜಯ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next