Advertisement

ಪಂಚಮಸಾಲಿಗರ ಮೀಸಲಾತಿಗೆ ವಿರೋಧವಿಲ್ಲ

12:17 AM Feb 20, 2021 | Team Udayavani |

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು  “ಪ್ರವರ್ಗ 2ಎ’ಗೆ ಸೇರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿಲ್ಲ ಎಂದು ಸಚಿವ ಜಗದೀಶ ಶೆಟ್ಟರ್‌ ಸ್ಪಷ್ಟನೆ ನೀಡಿದ್ದಾರೆ.

Advertisement

ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಾತಿನ ಚಕಮಕಿ ನಡೆದಿದೆ ಎಂಬುದು ಸತ್ಯಕ್ಕೆ ದೂರವಾದುದು. ಪಂಚಮಸಾಲಿ ಸಮು

ದಾಯಕ್ಕೆ  ಸೂಕ್ತ ಸ್ಥಾನ ಸಿಗಬೇಕು ಎಂಬುದನ್ನು ಮೊದಲಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇವೆ. ಇಂತಹ ಸುದ್ದಿಗಳ ಮೂಲಕ ಸಮುದಾಯದಲ್ಲಿ ನನ್ನ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಗಲಾಟೆ ನಡೆದಿಲ್ಲ: ಸಿ.ಸಿ.ಪಾಟೀಲ್‌

ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಗಲಾಟೆ ನಡೆದಿಲ್ಲ. ನನ್ನ ಹಾಗೂ ಜಗದೀಶ ಶೆಟ್ಟರ್‌  ನಡುವೆ ವಾಗ್ವಾದವಾಗಿಲ್ಲ ಎಂದು ಸಚಿವ ಸಿ.ಸಿ.ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.

Advertisement

ಗುರುವಾರ ನಡೆದ ಸಭೆಯಲ್ಲಿ ನಾನೂ ಪಾಲ್ಗೊಂಡಿದ್ದು,  ನಾನು ಹಾಗೂ ಮುರುಗೇಶ್‌ ನಿರಾಣಿ, ಸಮುದಾಯಕ್ಕೆ ಆರ್ಥಿಕ ಮತ್ತು ಶೈಕ್ಷಣಿಕ ಮೀಸಲಾತಿ ನೀಡ ಬೇಕೆಂದು ಸಿಎಂಗೆ ಮನವಿ ಮಾಡಿದ್ದು, ತಜ್ಞರು ಹಾಗೂ ನ್ಯಾಯವಾದಿಗಳೊಂದಿಗೆ ಚರ್ಚಿಸೋಣ ಎಂದು ಮುಖ್ಯಮಂತ್ರಿ ಹೇಳಿದ್ದರು ಎಂದರು.

 ಬೆಂಬಲವಿದೆ: ಸವದಿ

ಸಚಿವ ಸಂಪುಟದ ಗುರುವಾರದ ಸಭೆಯಲ್ಲಿ ಪಂಚಮಸಾಲಿ ಸಮು ದಾಯಕ್ಕೆ ಮೀಸಲಾತಿ ನೀಡಲು ನಾನು ವಿರೋಧ ವ್ಯಕ್ತಪಡಿಸಿಲ್ಲ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಹಿಂದೆ ಬೆಳಗಾವಿಯ ಸುವರ್ಣಸೌಧದ ಎದುರು ಪಂಚಮಸಾಲಿಗೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಪರಮ ಪೂಜ್ಯ  ಜಯ ಮೃತ್ಯುಂಜಯ ಸ್ವಾಮೀಜಿ ನಡೆಸಿದ್ದ  ಸತ್ಯಾಗ್ರಹ ಸ್ಥಳಕ್ಕೆ ಕಳೆದ ಅಕ್ಟೋಬರ್‌ನಲ್ಲಿ  ಭೇಟಿಕೊಟ್ಟು  ಉಪವಾಸ ಕೈಬಿಡಲು ಮನವಿ ಮಾಡಿದ್ದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next