Advertisement

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

08:54 PM Oct 09, 2024 | Team Udayavani |

ಚಿಕ್ಕಮಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿರುವ ವೇಳೆ ಚಿಕ್ಕಮ ಗಳೂರು ಶಾಸಕ ಎಚ್.ಡಿ.ತಮ್ಮಯ್ಯ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯರನ್ನು ಹೊರತುಪಡಿಸಿದರೇ ಭವಿಷ್ಯದ ನಾಯಕ ಎಂದು ಹೇಳುವ ಮೂಲಕ ಸತೀಶ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದಾರೆ.

Advertisement

ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಬುಧವಾರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಜಾರಕಿಹೊಳಿ ಪರ ಮಾತನಾಡಿದ್ದಾರೆ. ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ. ಸಿದ್ದರಾಮಯ್ಯ ನಂತರ ರಾಜ್ಯದಲ್ಲಿ ಹಾಗೂ ಪಕ್ಷದಲ್ಲಿ ಅಂತಹ ನಾಯಕನಿದ್ದರೇ ಅದು ಸತೀಶ್ ಜಾರಕಿಹೊಳಿ ಎಂದು ಬಹಿರಂಗ ವೇದಿಕೆಯಲ್ಲಿ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ದಸರಾ ಬಳಿಕ ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆ ಎಂದು ವಿಪಕ್ಷಗಳ ನಾಯಕರು ಹೇಳುತ್ತಿದ್ದಾರೆ. ಇದರ ಜತೆಗೆ ದಲಿತ ಮುಖ್ಯಮಂತ್ರಿಯಾಗಬೇಕು ಎನ್ನುವ ದೊಡ್ಡ ಚರ್ಚೆಯೂ ರಾಜ್ಯದಲ್ಲಿ ನಡೆಯುತ್ತಿರುವ ವೇಳೆ ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯ ಜಾರಕಿಹೊಳಿಯವರು ಭವಿಷ್ಯದ ನಾಯಕ ಎಂದು ಹೇಳುವ ಮೂಲಕ ಮತ್ತಷ್ಟು ಕೂತೂಹಲ ಮೂಡಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next