ಹೊಸದಿಲ್ಲಿ: ಸ್ವಾತಂತ್ರ್ಯದ 100 ನೇ ವರ್ಷವನ್ನು ಆಚರಿಸುವಾಗ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ. ಅದರಲ್ಲಿ ಭ್ರಷ್ಟಾಚಾರ, ಜಾತಿವಾದ ಮತ್ತು ಕೋಮುವಾದಕ್ಕೆ ಯಾವುದೇ ಸ್ಥಾನವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
“2047 ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ; ಭ್ರಷ್ಟಾಚಾರ, ಜಾತೀಯತೆ ಮತ್ತು ಕೋಮುವಾದಕ್ಕೆ ನಮ್ಮ ರಾಷ್ಟ್ರೀಯ ಜೀವನದಲ್ಲಿ ಯಾವುದೇ ಸ್ಥಾನವಿಲ್ಲ” ಎಂದು ಪ್ರಧಾನಿ ಹೇಳಿದರು.
ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆ ಕುರಿತು ಮಾತನಾಡಿದ ಪ್ರಧಾನಿ, ಮಾರ್ಗದರ್ಶನಕ್ಕಾಗಿ ಜಗತ್ತು ಭಾರತದತ್ತ ನೋಡುತ್ತಿದೆ ಎಂದರು. “ನಮ್ಮ ಮಾತುಗಳು ಮತ್ತು ದೃಷ್ಟಿಯನ್ನು ಪ್ರಪಂಚವು ಭವಿಷ್ಯದ ಮಾರ್ಗಸೂಚಿಯಾಗಿ ನೋಡುತ್ತದೆ, ಕೇವಲ ಕಲ್ಪನೆಗಳಲ್ಲ” ಎಂದು ಅವರು ಹೇಳಿದರು.
ಇದನ್ನೂ ಓದಿ:ODI World Cup 2023; ಭಾರತ ತಂಡ ಬಹುತೇಕ ಅಂತಿಮ; ಏಷ್ಯಾಕಪ್ ತಂಡದಲ್ಲಿರುವ ಇಬ್ಬರು ಔಟ್
ವಿಶ್ವದ ಜಿಡಿಪಿ-ಕೇಂದ್ರಿತ ದೃಷ್ಟಿಕೋನವು ಮಾನವ-ಕೇಂದ್ರಿತ ದೃಷ್ಟಿಕೋನಕ್ಕೆ ಬದಲಾಗುತ್ತಿದೆ. ಈ ಪರಿವರ್ತನೆಯಲ್ಲಿ ಭಾರತವು ವೇಗವರ್ಧಕವನ್ನು ವಹಿಸುತ್ತಿದೆ ಎಂದು ಪ್ರಧಾನಿ ಹೇಳಿದರು.
ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ಭಾರತ ತೆಗೆದುಕೊಂಡ ನಿಲುವು ಕುರಿತು ಪ್ರಶ್ನೆಯೊಂದಕ್ಕೆ ಪ್ರಧಾನಿ, ಸಂಘರ್ಷಗಳನ್ನು ಪರಿಹರಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆಯ ಏಕೈಕ ಮಾರ್ಗವಾಗಿದೆ ಎಂದು ಪುನರುಚ್ಚರಿಸಿದರು.