Advertisement

ಸ್ತ್ರೀಶಕ್ತಿ, ಯುವಶಕ್ತಿ, ಮಿಗಿಲಾದ ಶಕ್ತಿ ಇಲ್ಲ: ಪ್ರಮೋದ್‌

03:45 AM Jul 07, 2017 | Team Udayavani |

ಬ್ರಹ್ಮಾವರ: ರಾಜ್ಯ ಸರಕಾರ ತಾಯಂದಿರು ಮತ್ತು ಮಕ್ಕಳನ್ನು ಬಲಪಡಿಸಲು ಅನ್ನಭಾಗ್ಯ, ಕ್ಷೀರಧಾರೆ, ಕ್ಷೀರಭಾಗ್ಯದಂತಹ ಅತ್ಯುತ್ತಮ ಕಾರ್ಯಕ್ರಮಗಳನ್ನು ರೂಪಿಸಿದ್ದು, ಸ್ತ್ರೀಯರಿಗೆ ವಿಶೇಷ ಶಕ್ತಿ ನೀಡಲು ಸರ್ವ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

Advertisement

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಜಿಲ್ಲಾ/ತಾಲೂಕು ಸ್ತ್ರೀಶಕ್ತಿ ಒಕ್ಕೂಟ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಹಂದಾಡಿ ಗ್ರಾಮ ಪಂಚಾಯತ್‌ ಹತ್ತಿರ ಗಾಂಧಿ ಮೈದಾನದಲ್ಲಿ ಉಡುಪಿ ತಾಲೂಕು ಸ್ತ್ರೀಶಕ್ತಿ ಭವನ ಮಾರುಕಟ್ಟೆ ಸಂಕೀರ್ಣ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಸರಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವುದು ಪ್ರತಿಯೊಬ್ಬನ ಕರ್ತವ್ಯ, ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡರೆ ಸಮಾಜವು ಬಲಿಷ್ಠವಾಗುತ್ತದೆ. ಈ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ತ್ರೀಶಕ್ತಿ ಭವನದ ಪಕ್ಕದಲ್ಲೇ 6.5 ಎಕರೆಯಲ್ಲಿ ಗಾಂಧಿ  ಮೈದಾನವಿದ್ದು ತಮ್ಮ ಅಧಿ ಕಾರದ ಅವಧಿ ಯಲ್ಲೇ ಇದನ್ನು ಯುವಜನ ಮತ್ತು ಕ್ರೀಡಾ ಇಲಾಖೆಯ ಸುಪ ರ್ದಿಗೆ ತೆಗೆದುಕೊಂಡು ಉತ್ತಮ ಕ್ರೀಡಾಂಗಣವನ್ನು ಯುವಕರಿಗೋಸ್ಕರ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಹಂದಾಡಿ ಗ್ರಾ.ಪಂ. ಅಧ್ಯಕ್ಷೆ ಪ್ರತಿಮಾ ಶೆಟ್ಟಿ, ಚಾಂತಾರು ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ನಾಯ್ಕ, ತಾ.ಪಂ. ಸದಸ್ಯರಾದ ಸುಧೀರ್‌ ಕುಮಾರ್‌ ಶೆಟ್ಟಿ, ದಿನಕರ ಹೇರೂರು, ಕುಸುಮಾ ಪೂಜಾರಿ, ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್‌ ಉಪಸ್ಥಿತರಿದ್ದರು.ಶೋಭಾ ಕಾರ್ಯಕ್ರಮ ನಿರೂಪಿಸಿದರು.
 

Advertisement

Udayavani is now on Telegram. Click here to join our channel and stay updated with the latest news.

Next