Advertisement

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

11:42 PM Apr 19, 2024 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಜೆಹಾದಿ ಕರ್ನಾಟಕ ಸೃಷ್ಟಿಯಾಗಿದೆ. ಹಿಂದೂಗಳ ರಕ್ತಕ್ಕೆ ಬೆಲೆಯೇ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ.

Advertisement

ಕಾಂಗ್ರೆಸ್‌ ಸರಕಾರದ ವಿರುದ್ಧ ಚಾರ್ಜ್‌ಶೀಟ್‌ ಬಿಡುಗಡೆ ಮಾಡಿ ಮಾತನಾಡಿದ ಅವರು, ಇದೊಂದು ಕ್ರೂರ, ಹೃದಯಹೀನ ಸರಕಾರ. ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್‌ ಜೆಹಾದ್‌ ನಡೆಯುತ್ತಿದೆ. ಲವ್‌ ಜೆಹಾದ್‌ಗೆ ಕಾಂಗ್ರೆಸ್‌ ನಾಯಕರ ಕುಟುಂಬವೂ ಬಲಿಯಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಹಿಂದೂ ಯುವತಿ ಬರ್ಬರ ಹತ್ಯೆಯನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ. ಜೆಹಾದಿಗಳು ಮಚ್ಚು, ಲಾಂಗ್‌ ಹಿಡಿದು ಓಡಾಡುತ್ತಿದ್ದರೂ ಸರಕಾರ ಸುಮ್ಮನಿದೆ ಎಂದು ಆರೋಪಿಸಿದರು.

ಇದನ್ನು ಪ್ರೇಮ ಪ್ರಕರಣ, ಕುಟುಂಬದ ಸಮಸ್ಯೆ ಎಂದು ಹೇಳುವ ಕಾಂಗ್ರೆಸ್‌ ನಾಯಕರಿಗೆ ನಾಚಿಕೆಯಾಗಬೇಕು. ಇದು ಲವ್‌ ಜೆಹಾದ್‌ ಎಂದು ಕಾಂಗ್ರೆಸ್‌ ಕಾರ್ಪೊರೇಟರ್‌ ಆಗಿರುವ ಯುವತಿಯ ತಂದೆ ಹೇಳುತ್ತಿ¨ªಾರೆ. ಕುಟುಂಬದವರು ಕಣ್ಣೀರು ಹರಿಸುವಾಗ ಕೊಲೆಯಾದ ಯುವತಿ ಬಗ್ಗೆ ಹೀನಾಯವಾಗಿ ಮಾತಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲವ್‌ ಜೆಹಾದ್‌ ಮಾಡುವವರಿಗೆ ಪಾಸ್‌ಪೋರ್ಟ್‌, ಕೊಲೆ, ಗಲಭೆ ಮಾಡುವವರಿಗೆ ವೀಸಾ ನೀಡಲಾಗಿದೆ. ಬೆಳಗಾವಿಯಲ್ಲಿ ದಲಿತ ಮಹಿಳೆ ಯನ್ನು ಬೆತ್ತಲೆ ಮಾಡಿದ್ದಕ್ಕೆ ಆ ಪ್ರಕರಣವನ್ನೇ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆದಾಗ ಪೊಲೀಸರು ಏನೂ ಮಾಡಲಿಲ್ಲ. ಬಾಂಬ್‌ ಸ್ಫೋಟವನ್ನು ಸಚಿವರೇ ವ್ಯಾಪಾರದ ವ್ಯಾಜ್ಯ ಎಂದರು. ಜೈ ಶ್ರೀರಾಮ್‌ ಎಂದಾಗ ಮುಸ್ಲಿಮರು ಹಲ್ಲೆ ಮಾಡಿದ್ದರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next