Advertisement

BJP-JDS ಮೈತ್ರಿಯಲ್ಲಿ ಸಮಸ್ಯೆ ಇಲ್ಲ ಮೆತ್ತಗಾದ ಕುಮಾರಸ್ವಾಮಿ

12:31 AM Mar 20, 2024 | Team Udayavani |

ಬೆಂಗಳೂರು: ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿಯೂ ಎನ್‌ಡಿಎ ಮೈತ್ರಿಕೂಟ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

Advertisement

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋರ್‌ ಕಮಿಟಿ ಯಲ್ಲಿ ನಮ್ಮ ಪಕ್ಷದ ಮುಖಂಡರು ವ್ಯಕ್ತಪಡಿಸಿದ ಭಾವನೆಗಳನ್ನು ನಾನು ಹೇಳಿದ್ದೇನೆ ಅಷ್ಟೇ. ಈ ಬಗ್ಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚೆ ಮಾಡಿದ್ದೇನೆ. ನಾನು ಹೃದಯ ಶಸ್ತ್ರಚಿಕಿತ್ಸೆಗಾಗಿ ಚೆನ್ನೈಗೆ ಹೋಗುತ್ತಿದ್ದೇನೆ. ನಾನು ಬರುವವರೆಗೂ ಒಮ್ಮತವಾಗಿ ಮೈತ್ರಿ ಧರ್ಮಕ್ಕೆ ಬದ್ಧರಾಗಿ ಚುನಾ ವಣೆ ಕೆಲಸ ಮಾಡಿಕೊಂಡು ಹೋಗುವಂತೆ ನನ್ನ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದೇನೆ. ಅದೇ ರೀತಿ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಬಯಸುತ್ತೇನೆ ಎಂದರು.

ಕೋಲಾರ ಗೊಂದಲ ನಿವಾರಣೆ
ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಕೋಲಾರ ಕ್ಷೇತ್ರದ ಬಗ್ಗೆ ಗೊಂದಲ ನಿವಾರಣೆ ಆಗಿದೆ. ಆಸ್ಪತ್ರೆಯಿಂದ ಬಂದ ಕೂಡಲೆ ಮೂರೂ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡುತ್ತೇವೆ. ಮಂಡ್ಯ ಜಿಲ್ಲೆಯ ಕಾರ್ಯಕರ್ತರು ನಿರಾಶೆ ಪಡಬೇಕಿಲ್ಲ. ಅವರಿಗೆ ಒಪ್ಪಿಗೆಯಾಗುವ ಒಳ್ಳೆಯ ನಿರ್ಧಾರವನ್ನೇ ಪ್ರಕಟಿಸುತ್ತೇನೆ. ಇಂದಿನಿಂದಲೇ ಎಲ್ಲರೂ ಚುನಾ ವಣೆ ಕೆಲಸ ಆರಂಭಿಸಬೇಕು ಎಂದು ಮಂಡ್ಯ ಕಾರ್ಯಕರ್ತರಿಗೆ ಕರೆ ನೀಡಿದರು.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next