Advertisement

ಆಸ್ತಿ ಮುಟ್ಟುಗೋಲು ಕಾಯ್ದೆ ಇಲ್ಲ

10:46 PM Dec 30, 2019 | Lakshmi GovindaRaj |

ಬೆಂಗಳೂರು: ಪ್ರತಿಭಟನೆ ಹಾಗೂ ಹೋರಾಟದ ಸಂದರ್ಭದಲ್ಲಿ ಸರ್ಕಾರಿ ಆಸ್ತಿಗೆ ಹಾನಿ ಮಾಡಿದವರ ಆಸ್ತಿ ಮುಟ್ಟು ಗೋಲು ಹಾಕುವ ಕುರಿತು ಯಾವುದೇ ಕಾಯ್ದೆ ಜಾರಿ ಇಲ್ಲ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.

Advertisement

ಪ್ರತಿಭಟನೆ ಸಂದರ್ಭದಲ್ಲಿ ಆಸ್ತಿನಷ್ಟ ಮಾಡಿದವರಿಗೆ ದಂಡ ಹಾಗೂ ಶಿಕ್ಷೆ ವಿಧಿಸುವ ಬಗ್ಗೆ ಪ್ರಸ್ತಾಪ ಮಾಡಿದ್ದೆ. ಆದರೆ, ಈ ಬಗ್ಗೆಯೂ ತೀರ್ಮಾನವಾಗಿಲ್ಲ. ಉತ್ತರ ಪ್ರದೇಶ ಮಾದರಿಯಲ್ಲಿ ರಾಜ್ಯದಲ್ಲಿ ಯಾವುದೇ ಕಾನೂನು ಜಾರಿಗೆ ತಂದಿಲ್ಲ. ಸದ್ಯಕ್ಕೆ ಆ ರೀತಿಯ ಯಾವುದೇ ಚರ್ಚೆ ನಡೆದಿಲ್ಲ ಎಂದರು.

ಪೋಕೊÕ ಕಾಯ್ದೆ ಅಡಿಯಲ್ಲಿ ಆಂಧ್ರಪ್ರದೇಶದಲ್ಲಿ 21 ದಿನದಲ್ಲಿ ಅತ್ಯಾ ಚಾರಿಗೆ ಶಿಕ್ಷೆ ನೀಡುವ ಕಾನೂನು ಜಾರಿಗೆ ತರಲು ನಿರ್ಧರಿಸಿದ್ದಾರೆ. ನಮ್ಮ ಕಾನೂನಿನಲ್ಲಿ ಒಂದು ಪ್ರಕರಣ ಇತ್ಯರ್ಥಗೊಳಿಸಲು ಕನಿಷ್ಠ ಒಂದು ವರ್ಷ ಸಮಯ ಬೇಕಾ ಗುತ್ತದೆ. ಆದರೆ, 21 ದಿನದಲ್ಲಿ ಹೇಗೆ ಶಿಕ್ಷೆ ಕೊಡಲು ಸಾಧ್ಯ ಎಂಬ ಪ್ರಶ್ನೆ ಉದ್ಭವಿಸುತ್ತದೆ. ನೂರು ಆರೋಪಿಗಳು ತಪ್ಪಿಸಿಕೊಂಡರೂ ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು ಎಂದು ನಮ್ಮ ಕಾನೂನು ಹೇಳುತ್ತದೆ. ಹೀಗಾಗಿ ಎಲ್ಲವನ್ನೂ ಏಕಾಏಕಿ ತೀರ್ಮಾನ ಕೈಗೊಳ್ಳಲು ಆಗುವುದಿಲ್ಲ ಎಂದರು.

ರಾಮನಗರ ಜಿಲ್ಲೆಯ ಕಪಾಲಿ ಬೆಟ್ಟದಲ್ಲಿ ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣ ಮಾಡುವ ವಿಷಯವೂ ಸಂಪುಟದಲ್ಲಿ ಚರ್ಚೆಯಾಗಿಲ್ಲ. ಈ ಕುರಿತು ಸಂಪುಟ ಸಭೆಗೆ ಯಾವುದೇ ಕಡತ ಬಂದಿರಲಿಲ್ಲ. ಅಧಿಕೃತ ವಿಷಯಗಳನ್ನು ಬಿಟ್ಟು ಸಂಪುಟದಲ್ಲಿ ಬೇರೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಹೇಳಿದರು.

ಇದೇ ವೇಳೆ, ಬೆಂಗಳೂರಿನ ಭೂ ಒತ್ತುವರಿ ಪ್ರಕರಣಗಳ ಇತ್ಯರ್ಥ ವಿಳಂಬವಾಗುತ್ತಿದೆ ಎಂದು ಮಾಜಿ ಸಚಿವ ಎಚ್‌.ಕೆ. ಪಾಟೀಲ್‌ ಬರೆದಿರುವ ಪತ್ರಕ್ಕೆ ಪ್ರತಿಕ್ರಿಯಿಸಿದ ಅವರು, ಕೋರ್ಟ್‌ನಲ್ಲಿ ಕಾನೂನು ಬದ್ಧವಾಗಿ ವಿಚಾರಣೆ ನಡೆಯುತ್ತಿದೆ. ನ್ಯಾಯಾಲಯದ ವಿಚಾರದಲ್ಲಿ ಬೇಗ ತೀರ್ಪು ನೀಡುವಂತೆ ಸರ್ಕಾರ ಒತ್ತಡ ಹೇರಲು ಸಾಧ್ಯವಿಲ್ಲ. ಎಚ್‌.ಕೆ.ಪಾಟೀಲ್‌ ಅವರೂ ಕಾನೂನು ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು ಎಂದು ತಿರುಗೇಟು ನೀಡಿದ್ದಾರೆ.

Advertisement

ಬಹಿರಂಗವಾಗಿ ಚರ್ಚಿಸದಂತೆ ಸೂಚನೆ: ರಾಮನಗರ ಜಿಲ್ಲೆಯ ಕಪಾಲ ಬೆಟ್ಟದಲ್ಲಿ ಡಿ.ಕೆ.ಶಿವಕುಮಾರ್‌ ವಿಶ್ವದಲ್ಲಿಯೇ ಅತಿ ಎತ್ತರದ ಏಸುಕ್ರಿಸ್ತನ ಮೂರ್ತಿ ಪ್ರತಿಷ್ಠಾಪಿಸಲು ನಿರ್ಧರಿಸಿರುವ ಬಗ್ಗೆ ಅನಗತ್ಯ ಹೇಳಿಕೆ ನೀಡದಂತೆ ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆಂದು ತಿಳಿದು ಬಂದಿದೆ.

ಕಪಾಲ ಬೆಟ್ಟದ ವಿಷಯ ಧಾರ್ಮಿಕ ಭಾವನೆಗಳಿಗೆ ಸಂಬಂಧಿಸಿರುವುದರಿಂದ ಅದೇ ವಿಷಯವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಹಾಗೂ ಡಿ.ಕೆ.ಶಿವಕುಮಾರ್‌ ಲಾಭ ಪಡೆದುಕೊಳ್ಳಲು ಅವಕಾಶ ದೊರೆಯುವಂತಾಗಬಾರದು. ಈಗಾಗಲೇ ಪೌರತ್ವ ಕಾಯ್ದೆ ತಿದ್ದುಪಡಿ ವಿಷಯ ಗೊಂದಲಕ್ಕೆ ಕಾರಣವಾಗಿರುವುದರಿಂದ, ಏಸು ಕ್ರಿಸ್ತನ ಪ್ರತಿಮೆ ವಿಷಯವೂ ಮತ್ತಷ್ಟು ಗೊಂದಲ ಸೃಷ್ಠಿಗೆ ಕಾರಣವಾಗಬಾರದು ಎಂದು ಯಡಿಯೂರಪ್ಪ ಸಂಪುಟದ ಸಚಿವರಿಗೆ ಕಿವಿ ಮಾತು ಹೇಳಿದ್ದಾರೆ ಎನ್ನಲಾಗಿದೆ.

ಇಸ್ಕಾನ್‌ನವರು ಥೀಮ್‌ ಪಾರ್ಕ್‌ ಮಾಡಲು ಮುಂದಾದಾಗ ಡಿ.ಕೆ.ಶಿವಕುಮಾರ್‌ ಕಿರುಕುಳ ನೀಡಿ ಆ ಯೋಜನೆ ಸ್ಥಗಿತಗೊಳ್ಳುವಂತೆ ಮಾಡಿದರು. ನಮಗೆ ಕೃಷ್ಣನೂ ಒಂದೇ ಏಸುವೂ ಒಂದೇ. ಆದರೆ, ಗೋಮಾಳ ಜಮೀನು ದುರುಪಯೋಗವಾಗಿರುವ ಬಗ್ಗೆ ಕಂದಾಯ ಸಚಿವರು ತನಿಖೆಗೆ ಆದೇಶ ನೀಡಿದ್ದಾರೆ. ಅವರ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು.
-ಸಿ.ಟಿ.ರವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next