Advertisement

ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ ಕೇಂದ್ರ ಬೇಡ

03:00 PM May 09, 2020 | mahesh |

ರಾಮನಗರ: ಗ್ರಾಮದ ಹಾಸ್ಟೆಲ್‌ನಲ್ಲಿ ಹೊರ ಜಿಲ್ಲೆ ಕಾರ್ಮಿಕರನ್ನು ಕ್ವಾರಂಟೈನ್‌ ಮಾಡಲಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಕೆಂಪೇಗೌಡನದೊಡ್ಡಿ ನಿವಾಸಿ ಗಳು ಹಾಸ್ಟೆಲ್‌
ದಾರಿ ಬಂದ್‌ ಮಾಡಿ ಪ್ರತಿಭಟಿಸಿದ ಘಟನೆ ನಡೆದಿದೆ. ಗುರುವಾರ ತಡರಾತ್ರಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಕೆಲವು ಅಧಿಕಾರಿಗಳು ಹಾಸ್ಟೆಲ್ ಗೆ ಭೇಟಿ ನೀಡಿ,
ಸ್ವತ್ಛಗೊಳಿಸಿದ್ದರು. ಕೆಲವು ಕಾರ್ಮಿಕರನ್ನು ಇಲ್ಲಿ ಕ್ವಾರಂಟೈನ್‌ ಮಾಡಲಿದ್ದಾರೆ ಎಂಬ ಮಾಹಿತಿ ಪಡೆದ ಗ್ರಾಮಸ್ಥರು ಶುಕ್ರವಾರ ಬೆಳಿಗ್ಗೆ 200ಕ್ಕೂ ಹೆಚ್ಚು ಜನರು ಸೇರಿ ಹಾಸ್ಟೆಲ್…ಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಮರದ ಕೊಂಬೆಗಳು, ಕಲ್ಲು ಇತ್ಯಾದಿ ಇಟ್ಟು ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು.

Advertisement

ಪ್ರತಿಭಟನಾಕಾರರು ಯಾವುದೇ ಕಾರಣಕ್ಕೂ ಗ್ರಾಮದಲ್ಲಿ ಕ್ವಾರಂಟೈನ್‌ ಮಾಡಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಬಿಸಿಲನ್ನು ಲೆಕ್ಕಿಸದೇ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ
ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಮನವೊಲಿಸಲು ಪ್ರಯತ್ನಿಸಿದರೂ ಉಪಯೋಗ ವಾಗಲಿಲ್ಲ. ಮುಖಂಡ ಕೆ.ಬಿ.ರಾಜಣ್ಣ ಮಾತನಾಡಿ, ನಗರ ದಲ್ಲೇ ಸಾಕಷ್ಟು ಹಾಸ್ಟೆಲ…ಗಳಿದ್ದರೂ ಅಧಿಕಾರಿಗಳು ಗ್ರಾಮೀಣ ಪ್ರದೇಶಲ್ಲಿ ಕ್ವಾರಂಟೈನ್‌ ಮಾಡಲು ಮುಂದಾಗಿರುವುದು ಸರಿಯಲ್ಲ. ಬಡವರು ಕೂಲಿ ಕಾರ್ಮಿಕರು ಹೆಚ್ಚಾಗಿ ವಾಸಿಸುವ ಈ ಗ್ರಾಮದಲ್ಲಿ ಕೊರೊನಾ ಆತಂಕವಿಲ್ಲದೇ ನೆಮ್ಮದಿಯಾಗಿ ಜೀವನ ಮಾಡುತ್ತಿದ್ದೇವೆ. ಈಗ ಹೊರ ಜಿಲ್ಲೆಯಿಂದ ಕಾರ್ಮಿಕರನ್ನು ಕರೆತಂದು ಕ್ವಾರಂಟೈನ್‌ ಮಾಡಿ ನಮ್ಮ ಗ್ರಾಮಕ್ಕೆ ಕೋವಿಡ್ ಹಬ್ಬಿಸುವುದು ಬೇಡ. ಜಿಲ್ಲಾಡಳಿತ ತನ್ನ ನಿರ್ಧಾರ ಬದಲಾಯಿಸಬೇಕು ಎಂದು ಆಗ್ರಹಿಸಿದರು.

ಕೆಂಪೇಗೌಡನದೊಡ್ಡಿಯ ಮುಖಂಡರು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ತಮ್ಮ ಗ್ರಾಮದ ಹಾಸ್ಟೆಲ್‌ನ್ನು ಕ್ವಾರಂಟೈನ್‌ ಕೇಂದ್ರವನ್ನಾಗಿ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next