Advertisement

ಆದಿತ್ಯನ ಸಮರ್ಥಿಸುವ ಪ್ರಶ್ನೆಯೇ ಇಲ್ಲ: ಈಶ್ವರಪ್ಪ

11:38 PM Jan 24, 2020 | Team Udayavani |

ಶಿವಮೊಗ್ಗ: ಮಂಗಳೂರು ಬಾಂಬ್‌ ಪ್ರಕರಣದ ಆರೋಪಿ ಆದಿತ್ಯ ರಾವ್‌ನನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ಸ್ಪಷ್ಟಪಡಿಸಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ನವರು ಅನಗತ್ಯವಾಗಿ ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

Advertisement

ಈ ಮೂಲಕ ಪೊಲೀಸರ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಘಟನೆ ಬಗ್ಗೆ ತನಿಖೆ ಪ್ರಗತಿಯಲ್ಲಿದ್ದು ವರದಿ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಸಚಿವ ಸಂಪುಟ ರಚನೆ ಕೆಲ ರಾಜ್ಯದಲ್ಲಿನ ಚುನಾವಣೆ, ಪೌರತ್ವ ಮಸೂದೆ ಜಾರಿ ಮತ್ತಿತರ ಕಾರಣಗಳಿಂದ ವಿಳಂಬವಾಗಿದೆ.

ಪಕ್ಷೇತರ ಶಾಸಕ ಶಂಕರ್‌, ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್‌ ಹಾಗೂ ಆರ್‌.ಆರ್‌. ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡಲೇಬೇಕಿದೆ. ಇನ್ನುಳಿದವರ ಕುರಿತು ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಹೈಕಮಾಂಡ್‌ ಹೇಳಿದರೆ ಹಾಲಿ ಸಚಿವರು ತಮ್ಮ ಸ್ಥಾನವನ್ನು ತ್ಯಾಗ ಮಾಡಬೇಕಾಗುತ್ತದೆ ಎಂದರು. ಬಿಜೆಪಿಯಲ್ಲಿ ಮೂಲ ಹಾಗೂ ವಲಸಿಗರು ಎಂಬ ವ್ಯತ್ಯಾಸವಿಲ್ಲ.

ನಾವು ಹಾಲು ಸಕ್ಕರೆಯಂತೆ ಬೆರೆತು ಹೋಗಿದ್ದೇವೆ. ಆದರೆ ಕಾಂಗ್ರೆಸ್‌ನಲ್ಲಿ ಮೂಲ ಹಾಗೂ ವಲಸಿಗ ಎಂಬ ವ್ಯತ್ಯಾಸವಿದೆ. ಕಾಂಗ್ರೆಸ್‌ನವರು ಹಾಲು ಸಕ್ಕರೆಯಂತೆ ಬೆರೆಯದೆ ಹಾಲು, ವಿಷದಂತಾಗಿದ್ದಾರೆ. ಸಿದ್ದರಾಮಯ್ಯ ಅವರನ್ನು ಹೊರಹಾಕಲು ಡಿಕೆಶಿ ಸೇರಿದಂತೆ ಮೂಲ ಕಾಂಗ್ರೆಸ್ಸಿಗರು ಯತ್ನಿಸುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next