Advertisement

ಮಧ್ಯಂತರ ಚುನಾವಣೆಯ ಪ್ರಶ್ನೆಯೇ ಇಲ್ಲ: ಬಿಎಸ್‌ವೈ

10:23 AM Jun 08, 2019 | Vishnu Das |

ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಪ್ರಶ್ನೆಯೇ ಇಲ್ಲ. ಸರ್ಕಾರ ನಡೆಸಲು ಆದರೆ ನಡೆಸಲಿ, ಇಲ್ಲವಾದಲ್ಲಿ ಬಿಟ್ಟುಹೋಗಲಿ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಿಖಿಲ್‌ ಅವರು ಕಾರ್ಯಕರ್ತರಿಗೆ ಚುನಾವಣೆಗೆ ಸಿದ್ದಲಾಗಲು ಹೇಳಿದ್ದಾರೆ, ಆದರೆ ಯಾವುದೇ ಕಾರಣಕ್ಕೂ ಚುನಾವಣೆ ಈಗ ನಡೆಯುವುದಿಲ್ಲ, ಇನ್ನೂ 4 ವರ್ಷ ಬಾಕಿ ಇದೆ. ಈ ಸರ್ಕಾರ ಎಷ್ಟು ದಿನ ಇರುತ್ತದೆ ಎಂದು ಯಾರಿಗೂ ವಿಶ್ವಾಸವಿಲ್ಲ ಎಂದರು.

ಮೂರು ದಿನ ಬರ ಅಧ್ಯಯನ ಪ್ರವಾಸ
ನಾನು ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಬರ ಅಧ್ಯಯನ ಪ್ರವಾಸ ಮಾಡುತ್ತಿದ್ದೇನೆ. ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯಕ್ಕೆ ಅರ್ಥವಿಲ್ಲ. ಗ್ರಾಮ ವಾಸ್ತವ್ಯ ದ ಬದಲಾಗಿ ಬರಗಾಲ ನಿಯಂತ್ರಿಸಲು ಕ್ರಮ ಕೈಗೊಳ್ಳಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next