Advertisement

ನಾಯಕತ್ವ ಬದಲಾವಣೆಯ ಪ್ರಶ್ನೆಯಿಲ್ಲ: ಗೋವಿಂದ ಕಾರಜೋಳ

03:06 PM Jan 07, 2021 | Team Udayavani |

ದಾವಣಗೆರೆ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಎರಡೂವರೆ ವರ್ಷಗಳ ಕಾಲ ಯಡಿಯೂರಪ್ಪ ಅವರ ನೇತೃತ್ವದಲ್ಲೇ ಸರ್ಕಾರ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

Advertisement

ಗುರುವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ರಾಜ್ಯದ ಉಸ್ತುವಾರಿ ಅರುಣ್‌ಸಿಂಗ್ ಅವರೇ ಸಿಎಂ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅವರ ನಾಯಕತ್ವ ಮೆಚ್ಚಿಕೊಂಡಿದ್ದಾರೆ. ಹಾಗಾಗಿ ನಾಯಕತ್ವದ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಕಳೆದ ಸಾಲಿನ ಜುಲೈನಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೆಲ ದಿನಗಳಲ್ಲಿ ಮಳೆ, ಪ್ರವಾಹ ಪರಿಸ್ಥಿತಿ, ಆ ನಂತರ ಕೊರೊನಾ ಬಾಧಿಸಿತು.2020 ಸಂಪೂರ್ಣ ಸಂಕಷ್ಟ ವರ್ಷದ ನಡುವೆಯೂ ಯಡಿಯೂರಪ್ಪ ಉತ್ತಮ ಕೆಲಸ ಮಾಡಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಈಗ ಆರ್ಥಿಕತೆಗೆ ಅನುಗುಣವಾಗಿ ಆಭಿವೃದ್ದಿ ಕಾರ್ಯಗಳಿಗೆ ಒತ್ತು ನೀಡಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯಿಂದ ಪ್ರತಿ ಶಾಸಕರ ಕ್ಷೇತ್ರಕ್ಕೆ ಕಾಮಗಾರಿಗಳಿಗೆ 25 ಕೋಟಿ ಆನುದಾನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಸಭಾಪತಿಯಾಗಲು ಮೂರು ಪಕ್ಷಗಳಲ್ಲಿ ಸಮ್ಮತಿಯಿದೆ: ಹೊರಟ್ಟಿ ವಿಶ್ವಾಸ

ವಿಜಯಪುರ ಜಿಲ್ಲೆಯವರೇ ಆದ ಬಸವನಗೌಡ ಪಾಟೀಲ್ ಪದೇ ಪದೇ ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿ ಶಿಸ್ತಿನ ಪಕ್ಷ ಎಂದು ಹೇಳಲಾಗುತ್ತಿದೆ. ಆದರೂ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತಿಲ್ಲವಲ್ಲ ಏಕೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದನ್ನು ರಾಜ್ಯ, ರಾಷ್ಟ್ರೀಯ ನಾಯಕರು ನೋಡಿಕೊಳ್ಳುವರು ಎಂದಷ್ಟೇ ಉತ್ತರಿಸಿದರು.

Advertisement

ಇತ್ತೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 118 ಶಾಸಕರು ಭಾಗವಹಿಸಿದ್ದರು. ತಮ್ಮ ಕ್ಷೇತ್ರಗಳಲ್ಲಿ ಆಗಬೇಕಾದ ಅಭಿವೃದ್ಧಿ ಕಾಮಗಾರಿ, ಅನುದಾನದ ಬಗ್ಗೆ ಚರ್ಚಿಸಿದ್ದಾರೆ. ಯಾವುದೇ ಶಾಸಕರಲ್ಲಿ ಯಡಿಯೂರಪ್ಪ ಅವರ ಬಗ್ಗೆಯಾಗಲಿ ಯಾವುದೇ ರೀತಿಯ ಅಸಮಾಧಾನ ಏನೂ ಇಲ್ಲ. ಸಭೆಯಲ್ಲಿ ಯಾವ ಶಾಸಕರು ಸಹ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next