Advertisement
ನಗರದ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡ್ರಗ್ಸ್ ಪ್ರಕರಣದಲ್ಲಿ ಯಾರೇ ಪ್ರಭಾವಿಗಳಾದರು ಸಹ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕರು ತಮ್ಮ ಜವಾಬ್ದಾರಿಯಿಂದ ನೊಣಚಿಕೊಳ್ಳದೆ ರಾಜ್ಯದ ಯುವಕರನ್ನು ಮಾದಕ ವಸ್ತುಗಳಿಂದ ರಕ್ಷಣೆ ಮಾಡಲು ಸರ್ಕಾರಕ್ಕೆ ಸಹಕರಿಸಿ. ಯಾರನ್ನು ಸಹ ರಕ್ಷಣೆ ಮಾಡುವ ಕೆಲಸಕ್ಕೆ ಕೈಹಾಕಬೇಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುಧ್ಧ ಅಸಮಾಧಾನ ವ್ಯಕ್ತಪಡಿಸಿದರು.
Related Articles
Advertisement
ಡ್ರಗ್ಸ್ ಮಾಫೀಯಾದಲ್ಲಿ ತಪ್ಪಿತಸ್ಥರು ಯಾರೇ ಇರಲಿ ಯಾವ ಜನಾಂಗದವರು ಇರಲಿ,ಯಾವ ಭಾಷಿಗರಿಲಿ,ಶ್ರೀಮಂತರು–ಬಡವರು ಇರಲಿ ಪಕ್ಷಾತೀತವಾಗಿ,ಜಾತ್ಯಾತೀತವಾಗಿ ನಮ್ಮ ಬಿಜೆಪಿ ಸರ್ಕಾರ ತನಿಖೆ ನಡೆಸಿ ಕ್ರಮ ಜರುಗಿಸುತ್ತದೆ ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಹೊಸ ಪದ್ದತಿಗಳಿಂದ ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ ಮೇಲೆ ಬೀರುವ ಪರಿಣಾಮಗಳ ಕುರಿತು ಕಾಲೇಜಿನಲ್ಲಿ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲು ಗಮನಹರಿಸುತ್ತಿದ್ದಾರೆ. ಗಡಿ ಭಾಗಗಳಲ್ಲಿ 20 ಕಡೆ ದಾಳಿ ನಡೆಸಿ 20 ಜನರನ್ನು ಬಂಧಿಸಿ 65 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ(ಚಿನ್ನಿ),ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು,ಜಿಲ್ಲಾಧಿಕಾರಿ ಆರ್.ಲತಾ,ಜಿಪಂ ಸಿಇಒ ಫೌಝೀಯಾ ತರುನ್ನುಮ್,ಜಿಲ್ಲಾ ಎಸ್ಪಿ ಮಿಥುನ್‍ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.